ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವಾರ ಚುನಾವಣಾ ದಿನಾಂಕ ಘೋಷಣೆ

Last Updated 4 ಮಾರ್ಚ್ 2023, 2:54 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕವನ್ನು ಮುಂದಿನವಾರ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಮಾ.9ರಂದು ನಿಗದಿಯಾಗಿದ್ದ ದಿನಾಂಕವನ್ನು ಆಯೋಗ ಕಳೆದ ವಾರ ಮುಂದೂಡಿತ್ತು. ‘ಹಣಕಾಸು ಇಲಾಖೆ, ಸರ್ಕಾರಿ ಮುದ್ರಣ ಮತ್ತು ಪೊಲೀಸ್‌ ಅಧಿಕಾರಿಗಳ ಜೊತೆ ಮುಂದಿನ ವಾರ ಚರ್ಚಿಸಿ ನಂತರ ದಿನಾಂಕ ಘೋಷಿಸಲಾಗುವುದು‘ ಎಂದು ಆಯೋಗದ ಮುಖ್ಯಸ್ಥ ನಿಮಲ್‌ ಪುಂಚಿಹೆವಾ ಅವರು ತಿಳಿಸಿದ್ದಾರೆ.

ಈ ಮಧ್ಯೆ 2023ರ ಬಜೆಟ್‌ನಲ್ಲಿ ಚುನಾವಣೆಗೆ ಮೀಸಲಿಟ್ಟಿರುವ ಹಣ ಬಿಡುಗಡೆ ಮಾಡುವಂತೆ ಶುಕ್ರವಾರ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT