ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಅರಾಜಕತೆ: ಪರಿಸ್ಥಿತಿ ನಿಯಂತ್ರಿಸಲು ಸೇನೆಗೆ ಸಂಪೂರ್ಣ ಅಧಿಕಾರ

ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಲ್ಲಿ ಸಾರ್ವಜನಿಕ ಆಸ್ತಿ ಮತ್ತು ಪ್ರಾಣ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಬಲವನ್ನು ಬಳಸಲು ಸೇನೆ ಸಂಪೂರ್ಣ ಅಧಿಕಾರ ಹೊಂದಿದೆ.

ಸೇನೆಯ ಈ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ರಾಯಟರ್ಸ್‌’ ವರದಿ ಮಾಡಿದೆ.

ತೀವ್ರ ಆರ್ಥಿಕ ಬಿಕ್ಕಟ್ಟನಿಂದ ನರಳುತ್ತಿರುವ ಶ್ರೀಲಂಕಾದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ರಾಜೀನಾಮೆಗೆ ಮುಂದಾಗದ ಅಧ್ಯಕ್ಷ ಗೊಟಬಯ ರಾಜಪಕ್ಸ ಸಿಂಗಾಪುರಕ್ಕೆ ಪರಾರಿಯಾಗಿದ್ದಾರೆ.

ಹಂಗಾಮಿ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಪ್ರತಿಭಟನಾಕಾರರ ಮೇಲೆ ಶಿಸ್ತುಕ್ರಮಕ್ಕೆ ಸೂಚಿಸಿದ್ದಾರೆ. ‘ಫ್ಯಾಸಿಸ್ಟರು ಶ್ರೀಲಂಕಾ ಸರ್ಕಾರವನ್ನು ಕಿತ್ತೊಗೆಯಲು ಯತ್ನಿಸುತ್ತಿದ್ದಾರೆ’ ಎಂದು ಹರಿಹಾಯ್ದಿದ್ದಾರೆ.

ಹಂಗಾಮಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಸಂಸತ್ತಿನ ಸ್ಪೀಕರ್‌ಗೆ ವಿರೋಧ ಪಕ್ಷಗಳು ಮನವಿ ಮಾಡಿವೆ.

ಶ್ರೀಲಂಕಾದ ಪ್ರತಿಭಟನಾಕಾರರು ಸರ್ಕಾರದ ಅಧಿಕೃತ ಕಟ್ಟಡಗಳನ್ನು ಶಾಂತಿಯುತವಾಗಿ ತೆರವು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಅಧ್ಯಕ್ಷ ಮತ್ತು ಪ್ರಧಾನ ಮಂತ್ರಿಯನ್ನು ಕೆಳಗಿಳಿಸಲು ತಮ್ಮ ಪ್ರಯತ್ನವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT