ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಜುಲೈ 10ರವರೆಗೆ ಅಗತ್ಯ ಸೇವೆ ಮಾತ್ರ ನಿರ್ವಹಣೆ

ಆರ್ಥಿಕ ಬಿಕ್ಕಟ್ಟು: ತೀವ್ರ ಇಂಧನ ಕೊರತೆ
Last Updated 27 ಜೂನ್ 2022, 18:25 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಆರ್ಥಿಕ ಬಿಕ್ಕಟ್ಟು ಮತ್ತು ತೀವ್ರ ಇಂಧನ ಕೊರತೆಯನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರವರೆಗೆ ಅಗತ್ಯ ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು, ಇತರ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂಧು ಅಲ್ಲಿನ ಸರ್ಕಾರ ಸೋಮವಾರ ಘೋಷಿಸಿದೆ.

ಆರೋಗ್ಯ, ರಕ್ಷಣೆ, ವಿದ್ಯುತ್ ಮತ್ತು ರಫ್ತು ವಲಯಗಳಿಗೆ ಮಾತ್ರ ಇಂಧನವನ್ನು ನೀಡಲಾಗುವುದು ಎಂದು ಸಂಪುಟದ ವಕ್ತಾರ ಬಂಡುಲ ಗುಣವರ್ಧನ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಹಾರ, ಇಂಧನ ಮತ್ತು ವಿದ್ಯುತ್ ಕೊರತೆ ಎದುರಾಗಿದ್ದು, ಆಮದು ತೈಲವನ್ನೂ ಖರೀದಿಸಲು ಸಾಧ್ಯವಿಲ್ಲ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಹೇಳಿದ ಕೆಲ ದಿನಗಳ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT