ಮಂಗಳವಾರ, ಸೆಪ್ಟೆಂಬರ್ 29, 2020
21 °C

ರಾಜಪಕ್ಸೆ ಮತ್ತೆ ಅಧಿಕಾರಕ್ಕೆ?

ಪಿಟಿಐ Updated:

ಅಕ್ಷರ ಗಾತ್ರ : | |

ಮಹಿಂದ ರಾಜಪಕ್ಸೆ

ಕೊಲಂಬೊ: ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ಪಕ್ಷ ಎಸ್‌ಎಲ್‌ಪಿಪಿ ಜಯಭೇರಿಯತ್ತ ಸಾಗಿದ್ದು, ಏಷ್ಯಾದಲ್ಲಿ ದೀರ್ಘಾವಧಿಗೆ ಆಡಳಿತ ನಡೆಸಿದ ಖ್ಯಾತಿ ಹೊಂದಿರುವ ರಾಜಪಕ್ಸೆ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ.

ದ್ವೀಪ ರಾಷ್ಟ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ತಡರಾತ್ರಿಯೂ ಮುಂದುವರಿಯಿತು. ಶ್ರೀಲಂಕಾ ಸಂಸತ್‌ನ ಸದಸ್ಯರ ಸಂಖ್ಯೆ 225. ಪ್ರಕಟವಾದ ಫಲಿತಾಂಶಗಳ ಪೈಕಿ ರಾಜಪಕ್ಸೆಯವರ ಪಕ್ಷ ಭಾರಿ ಗೆಲುವಿನತ್ತ ಸಾಗಿದೆ.

ಅಧ್ಯಕ್ಷ ಗೋಟಬಯ ರಾಜಪಕ್ಸೆ ‘ಇದು ಆಡಳಿತಾರೂಢ ಪಕ್ಷಕ್ಕೆ ಲಭಿಸಿದ ಅದ್ಭುತ ಗೆಲುವು’ ಎಂದು ಟ್ವೀಟ್‌ ಮಾಡಿದ್ದಾರೆ.  ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು  ರಾಜಪಕ್ಸೆ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.  ಮಹಿಂದ ಅವರ ಪ್ರಬಲ ಪ್ರತಿಸ್ಪರ್ಧಿ ಎಂದೇ ಪರಿಗಣಿಸಲಾಗಿರುವ ಸಜಿತ್‌ ಪ್ರೇಮದಾಸ ಅವರ ಪಕ್ಷ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ (ಯುಎನ್‌ಪಿ) ನಾಲ್ಕನೇ ಸ್ಥಾನ ಪಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು