ಶ್ರೀಲಂಕಾ: ಭಾರತದ 56 ಮೀನುಗಾರರ ಬಿಡುಗಡೆಗೆ ನ್ಯಾಯಾಲಯ ಆದೇಶ

ಕೊಲಂಬೊ (ಪಿಟಿಐ): ದ್ವೀಪ ರಾಷ್ಟ್ರದ ಗಡಿ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನವಾಗಿದ್ದ 56 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ಈ ಮೊದಲು ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ಉಳಿದ ಭಾರತೀಯ ಮೀನುಗಾರರನ್ನು ಕೂಡ ಬಿಡುಗಡೆ ಮಾಡುವಂತೆಯೂ ಆದೇಶದಲ್ಲಿ ಹೇಳಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.