ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ– ದಂಗೆ ಎದ್ದ ಜನ: ಶ್ರೀಲಂಕಾ ಪ್ರಧಾನಿ ಕುರ್ಚಿಯನ್ನು ಕಾಯುತ್ತಿರುವ ಮಿಲಿಟರಿ

Last Updated 14 ಜುಲೈ 2022, 6:51 IST
ಅಕ್ಷರ ಗಾತ್ರ

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶವನ್ನು ಮುನ್ನಡೆಸಬೇಕಾದ ಪ್ರಧಾನಿ ಮತ್ತು ಅಧ್ಯಕ್ಷರೇ ಭಯದಲ್ಲಿ ತತ್ತರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ನಾಗರಿಕರು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕುರ್ಚಿಯನ್ನು ಮಿಲಿಟರಿ ಕಾವಲು ಕಾಯುತ್ತಿದೆ.

ಈಗಾಗಲೇ, ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ಅರಮನೆಯನ್ನು ವಶಪಡಿಸಿಕೊಂಡಿರುವ ಪ್ರತಿಭಟನಾಕಾರರು, ರಾಜೀನಾಮೆ ಕೊಡದ ಹೊರತು ಹೊರಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಈ ಮಧ್ಯೆ, ಜನರ ಆಕ್ರೋಶದ ಕಿಚ್ಚಿಗೆ ಹೆದರಿ ಅಧ್ಯಕ್ಷ ಗೊಟಬಯ ರಾಜಪಕ್ಸ ದೇಶ ಬಿಟ್ಟು ತೆರಳಿದ್ದರೆ. ಇತ್ತ, ಪ್ರಭಾರಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತೀವ್ರ ಪ್ರತಿರೋಧ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪೀಠಕ್ಕೆ ಭದ್ರತೆ ಒದಗಿಸಲಾಗಿದೆ.

ನಿನ್ನೆ ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ವೇಳೆ, ಸಂಸತ್ ಭವನಕ್ಕೆ ನುಗ್ಗಲು ಯತ್ನಿಸಿದ್ದ ಪ್ರತಿಭಟನಾಕಾರರು ರಾನಿಲ್ ಎರಡೂ ಹುದ್ದೆ ತೊರೆಯಬೇಕೆಂದು ಒತ್ತಾಯಿಸಿದ್ದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT