ಶ್ರೀಲಂಕಾ ನೌಕಾಪಡೆಯಿಂದ 16 ಭಾರತೀಯ ಮೀನುಗಾರರ ಬಂಧನ

ರಾಮೇಶ್ವರ: ತಮ್ಮ ಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 16 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ.
ಎರಡು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಮೀನುಗಾರಿಕೆ ಬಳಿಸಿದ ಎರಡು ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಭಾರತೀಯ ಮೀನುಗಾರರನ್ನು ಬಂಧಿಸಿದ್ದ ಹಲವು ಪ್ರಕರಣಗಳು ನಡೆದಿದ್ದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.