ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಸಂಸತ್ ಸಭೆ ನಾಳೆ: ಏಳು ದಿನದ ಒಳಗಾಗಿ ನೂತನ ಅಧ್ಯಕ್ಷರ ಆಯ್ಕೆ

ಏಳು ದಿನದ ಒಳಗಾಗಿ ನೂತನ ಅಧ್ಯಕ್ಷರ ಆಯ್ಕೆ
Last Updated 15 ಜುಲೈ 2022, 10:28 IST
ಅಕ್ಷರ ಗಾತ್ರ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿರುವ ಶ್ರೀಲಂಕಾದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಸಂಸತ್‌ ಸಭೆ ಕರೆಯಲಾಗಿದೆ ಎಂದು ಸಭಾಪತಿ ಮಹಿಂದಾಯಾಪಾ ಅಬೇವರ್ದೆನಾ ಅವರು ತಿಳಿಸಿದ್ದಾರೆ.

‘ಸಂಸತ್ತು ಶನಿವಾರ ಸಭೆ ಸೇರಲಿದ್ದು, ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ಏಳು ದಿನಗಳ ಒಳಗಾಗಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಸಂವಿಧಾನದ ಪ್ರಕಾರ, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು, ಅಧ್ಯಕ್ಷರ ಹುದ್ದೆಯ ಕಾರ್ಯಗಳು, ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ’ ಎಂದು ಸ್ಪೀಕರ್ ತಿಳಿಸಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಅಧ್ಯಕ್ಷಗೊಟಬಯ ರಾಜಪಕ್ಸ ಅವರು ರಾಜೀನಾಮೆ ನೀಡಿರುವ ವಿಷಯವನ್ನು ಸ್ಪೀಕರ್‌ ಅವರು ಅಧಿಕೃತವಾಗಿ ಸದನದಲ್ಲಿ ಪ್ರಕಟಿಸಿದರು. ಮಾಲ್ಡೀವ್ಸ್‌ನಿಂದ ಸಿಂಗಪುರಕ್ಕೆ ಗುರುವಾರ ತೆರಳಿರುವ ಅವರು ಅಲ್ಲಿಂದಲೇ ರಾಜೀನಾಮೆ ಪತ್ರವನ್ನು ಶ್ರೀಲಂಕಾ ಸಂಸತ್ತಿನ ಸ್ಪೀಕರ್‌ಗೆ ಅವರಿಗೆ ಇ–ಮೇಲ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT