ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಮನೆಗೆ ಬೆಂಕಿ: ಮೂವರ ಬಂಧನ

ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಕೇಂಬ್ರಿಡ್ಜ್ ಪ್ಲೇಸ್‌ನಲ್ಲಿರುವ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಶನಿವಾರ ರಾತ್ರಿ ನುಗ್ಗಿದ್ದ ಆಕ್ರೋಶಭರಿತ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಅಪಾರ ಆಸ್ತಿಗೆ ಹಾನಿಯುಂಟಾಗಿದೆ.

ಶಂಕಿತ ಆರೋಪಿಗಳು ಪ್ರಸ್ತುತ ಕೋಲ್‌ಪೆಟ್ಟಿ ಪೊಲೀಸರ ವಶದಲ್ಲಿದ್ದು, ಸೋಮವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಕಿಗೆ ಆಹುತಿಯಾಗಿರುವ ನಿವಾಸವು ಅಪರೂಪದ ಪುಸ್ತಕಗಳು ಮತ್ತು ಬುದ್ಧನ ಹಳೆಯ ಪ್ರತಿಮೆಗಳಿಂದ ತುಂಬಿತ್ತು ಎಂದು ಕೊಲಂಬೊ ಪೇಜ್ ವರದಿ ಮಾಡಿದೆ.

ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT