ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕತೆ ಸುಧಾರಣೆ, ಇಂಧನ ಕೊರತೆ ನೀಗಿಸಲು ಕ್ರಮ; ಶ್ರೀಲಂಕಾ ನೂತನ ಅಧ್ಯಕ್ಷ ಭರವಸೆ

Last Updated 28 ಜುಲೈ 2022, 14:11 IST
ಅಕ್ಷರ ಗಾತ್ರ

ಕೊಲಂಬೊ: ಕುಸಿದಿರುವ ದೇಶದ ಆರ್ಥಿಕತೆ ಸರಿಪಡಿಸುವುದು ಮತ್ತು ಇಂಧನ ಕೊರತೆ ನೀಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದುಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಂತಿಯುತ ಪ್ರತಿಭಟನೆಗೆ ಸರ್ಕಾರದ ವಿರೋಧವಿಲ್ಲ. ಕಾನೂನು ಉಲ್ಲಂಘಿಸದಿದ್ದರೆಎಲ್ಲಾ ಸಂದರ್ಭದಲ್ಲೂ ಪ್ರತಿಭಟನಕಾರರಿಗೆ ಅವಕಾಶ ನೀಡಲಾಗುತ್ತದೆ. ದೇಶ ಸಂಕಷ್ಟದ ಸ್ಥಿತಿಯಲ್ಲಿರುವಾಗ ಅಧ್ಯಕ್ಷನಾಗಿದ್ದೇನೆ. ಆರ್ಥಿಕತೆಯನ್ನು ಸರಿದಾರಿಗೆ ತರಬೇಕಾಗಿದೆ ಎಂದು ತಿಳಿಸಿದರು.

ವಿದ್ಯುತ್ ಮತ್ತು ಇಂಧನ ಸಚಿವ ಕಾಂಚನಾ ವಿಜೆಶೇಖರ ಮಾತನಾಡಿ, ದ್ವೀಪ ರಾಷ್ಟ್ರದಾದ್ಯಂತ ಇಂಧನ ವಿತರಣೆಗೆ ಪಡಿತರ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT