ಬುಧವಾರ, ಜುಲೈ 28, 2021
20 °C

ಶ್ರೀಲಂಕಾ: 9ನೇ ಬಾರಿ ಸಂಸದರಾಗಿ ರಾನಿಲ್‌ ಪ್ರಮಾಣ ವಚನ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ರಾನಿಲ್ ವಿಕ್ರಮ ಸಿಂಘೆ

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಅವರು ಸಂಸದರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಅವರು 9ನೇ ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. 1977ರಿಂದ ಸಂಸತ್‌ಗೆ ನಡೆದ ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಶ್ರೀಲಂಕಾದ ಏಕೈಕ ರಾಜಕಾರಣಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ರಾನಿಲ್‌ ಅವರು ಯುನೈಟೆಡ್‌ ನ್ಯಾಷನಲ್‌ ಪಾರ್ಟಿಯನ್ನು (ಯುಎನ್‌ಪಿ) 1994ರಿಂದ ಮುನ್ನಡೆಸುತ್ತಿದ್ದಾರೆ. 

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ದೇಶದ ಸದ್ಯದ ಆರ್ಥಿಕ ದುಃಸ್ಥಿತಿಗೆ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹಾಗೂ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ದುರಾಡಳಿತವೇ ಕಾರಣ ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು