ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾನಿಲ್‌ ವಿಕ್ರಮಸಿಂಘೆ ಬೆಂಬಲಿಸಲು ಆಡಳಿತ ಪಕ್ಷ ಎಸ್‌ಎಲ್‌ಪಿಪಿ ತೀರ್ಮಾನ

ಜುಲೈ 20ರಂದು ಶ್ರೀಲಂಕಾ ನೂತನ ಅಧ್ಯಕ್ಷರ ಆಯ್ಕೆ
Last Updated 15 ಜುಲೈ 2022, 13:14 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಲ್ಲಿ ಅಧ್ಯಕ್ಷರ ಆಯ್ಕೆಗೆ ಮುಂದಿನ ವಾರ ನಡೆಯಲಿರುವ ಚುನಾವಣೆಯಲ್ಲಿಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗೇಬೆಂಬಲ ನೀಡಲು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ (ಎಸ್‌ಎಲ್‌ಪಿಪಿ) ಪಕ್ಷ ಶುಕ್ರವಾರ ನಿರ್ಧರಿಸಿದೆ.

‘ಗೊಟಬಯ ರಾಜಪಕ್ಸ ಅವರ ರಾಜೀನಾಮೆ ಬಳಿಕ ದೇಶದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರಿಗೆ ನಮ್ಮ ಬೆಂಬಲ’ ಎಂದು ಎಸ್‌ಎಲ್‌ಪಿಪಿ ಪ್ರಧಾನ ಕಾರ್ಯದರ್ಶಿ ಸಾಗರ ಕರಿಯವಸಂ ಅವರು ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಜುಲೈ 20ರಂದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಜುಲೈ 19ರಂದು ನಾಮಪತ್ರ ಸಲ್ಲಿಕೆ ‍ಪ್ರಕ್ರಿಯೆ ನಡೆಯಲಿದೆ ಎಂದು ಸ್ಪೀಕರ್‌ ಅಬೆವರ್ದನ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT