ಶನಿವಾರ, ಅಕ್ಟೋಬರ್ 1, 2022
20 °C
ಶ್ರೀಲಂಕಾ ಸುಪ್ರೀಂಕೋರ್ಟ್‌ ಆದೇಶ

ಮಹಿಂದ ರಾಜಪಕ್ಸ ವಿದೇಶ ಪ್ರಯಾಣ ನಿರ್ಬಂಧ ಅವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ಮತ್ತು ಅವರ ಕಿರಿಯ ಸೋದರ, ಮಾಜಿ ಹಣಕಾಸು ಸಚಿವ ಬಸಿಲ್‌ ರಾಜಪಕ್ಸ ಅವರ ವಿದೇಶ ಪ್ರಯಾಣಕ್ಕೆ ಇರುವ ನಿರ್ಬಂಧವನ್ನು ಸೆಪ್ಟೆಂಬರ್‌ 5ರವರೆಗೆ ವಿಸ್ತರಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ದೇಶದ ಆರ್ಥಿಕ ಬಿಕ್ಕಟ್ಟಿಗೆ ಇವರೇ ಜವಾಬ್ದಾರರೆಂದು ಆರೋಪಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 15ರಂದು ನಡೆಸಿದ ಸುಪ್ರೀಂಕೋರ್ಟ್‌, ಜುಲೈ 28ರವರೆಗೆ ದೇಶ ಬಿಟ್ಟು ಹೋಗದಂತೆ ನಿರ್ಬಂಧ ವಿಧಿಸಿತ್ತು. ಬಳಿಕ  ಆಗಸ್ಟ್‌ 1 ಮತ್ತು ಆಗಸ್ಟ್‌ 3ರಂದು ಎರಡು ಬಾರಿ ವಿಸ್ತರಣೆ ಮಾಡಿತ್ತು.

ದೇಶದ ಆರ್ಥಿಕ ಬಿಕ್ಕಟ್ಟಿಗೆ ಬಸಿಲ್‌, ಮಹಿಂದ ರಾಜಪಕ್ಸ ಮತ್ತು ಕೇಂದ್ರ ಬ್ಯಾಂಕ್‌ನ ಮಾಜಿ ಗವರ್ನರ್‌ ಅಜಿತ್‌ ನಿವಾರ್ಡ್ ಕಬ್ರಾಲ್‌ ಅವರೇ ನೇರ ಕಾರಣ ಎಂದು ಅರ್ಜಿದಾರರ ಗುಂಪು ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು