ಗುರುವಾರ , ಮೇ 26, 2022
25 °C

ಲೈಬೀರಿಯಾದಲ್ಲಿ ಕಾಲ್ತುಳಿತ: 29 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊನ್ವೋರಿಯಾ: ಲೈಬೀರಿಯಾದ ರಾಜಧಾನಿಯಾದ ಇಲ್ಲಿ ಕ್ರೈಸ್ತ ಧಾರ್ಮಿಕ ಸಮಾರಂಭವೊಂದರಲ್ಲಿ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ 11 ಮಂದಿ ಮಕ್ಕಳು, ಒಬ್ಬರು ಗರ್ಭಿಣಿ ಸಹಿತ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಚಾಕು, ಚೂರಿ ಹಿಡಿದಿದ್ದ ಕೊಲೆಗಡುಕರ ಗುಂಪೊಂದು ದಾಳಿ ನಡೆಸಿದ್ದರಿಂದ ಜನ ಭಯಗೊಂಡು ಚೆಲ್ಲಾಪಿಲ್ಲಿಯಾಗಿ ಓಡಿದಾಗ ಕಾಲ್ತುಳಿತ ಸಂಭವಿಸಿತು. ಘಟನೆಯ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.

ಮೊನ್ವೋರಿಯಾ ಮತ್ತು ಇತರ ನಗರಗಳಲ್ಲಿ ಬೀದಿ ಕಾಳಗಗಳು ಈಚಿನ ದಿನಗಳಲ್ಲಿ ಹೆಚ್ಚಿದ್ದು, ಅದರ ಭಾಗವಾಗಿ ಈ ದಾಳಿಯೂ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು