ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಲಿಪ್ಪೀನ್ಸ್‌ನಲ್ಲಿ ಭೂಕಂಪ: ಕಟ್ಟಡಗಳಿಗೆ ಹಾನಿ

Last Updated 18 ಆಗಸ್ಟ್ 2020, 8:01 IST
ಅಕ್ಷರ ಗಾತ್ರ

ಮನಿಲಾ: ಕೇಂದ್ರ ಫಿಲಿಪ್ಪೀನ್ಸ್‌‌ನಲ್ಲಿ ಮಂಗಳವಾರ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆ ಪ್ರಮಾಣವು ರಿಕ್ಟರ್‌ ಮಾಪಕದಲ್ಲಿ 6.6ರಷ್ಟು ದಾಖಲಾಗಿದೆ.

ಕರಾವಳಿ ಭಾಗವಾದ ಕ್ಯಾಟಿಂಗನ್‌ ಪ್ರದೇಶದಿಂದ ಸುಮಾರು 5 ಕಿ.ಮೀ ದೂರದಲ್ಲಿ ಕೇಂದ್ರ ಬಿಂದು ಗುರುತಿಸಲಾಗಿದ್ದು, ಕಂಪನವು ಭೂಮಿಯ 21 ಕಿಲೋ ಮೀಟರ್ ವ್ಯಾಪ್ತಿಯ ಆಳದಲ್ಲಿ ದಾಖಲಾಗಿದೆ ಎಂದು ಫಿಲಿಪ್ಪೀನ್ಸ್‌‌ನಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ ತಿಳಿಸಿದೆ.

ಹಲವಾರು ಸ್ಥಳಗಳಲ್ಲಿ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದ ಸುನಾಮಿ ಉಂಟಾಗುವ ಯಾವ ಸಾಧ್ಯತೆಯೂ ಇಲ್ಲ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಕ್ಯಾಟಿಂಗನ್‌ನ ರಸ್ತೆ ಮತ್ತು ಸೇತುವೆಗಳಲ್ಲಿ ಬಿರುಕು ಮೂಡಿದೆ. ಈ ವೇಳೆ ಹಲವು ಕಟ್ಟಡಗಳು ಕುಸಿದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಕುಟುಂಬವೊಂದನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT