ಕ್ಯಾಪಿಟಲ್ ಹಿಲ್ ಹಿಂಸಾಚಾರ: ಸ್ವತಂತ್ರ ತನಿಖೆಗೆ ಹೆಚ್ಚಿದ ಒತ್ತಡ

ವಾಷಿಂಗ್ಟನ್: ಕ್ಯಾಪಿಟಲ್ ಹಿಲ್ ಕಟ್ಟಡದಲ್ಲಿ ಜನವರಿ 6ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕು ಎನ್ನುವ ಒತ್ತಾಯಕ್ಕೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ.
ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಖುಲಾಸೆಗೊಳಿಸಿ ಸೆನೆಟ್ ತೀರ್ಪು ನೀಡಿದ ಬಳಿಕ, ಈ ವಿಷಯವನ್ನು ಹಲವು ಸಂಸದರು ಮತ್ತು ಸಂಘಟನೆಗಳ ಪ್ರಮುಖರು ಪ್ರಸ್ತಾಪಿಸಿದ್ದಾರೆ.
2001ರ ಸೆಪ್ಟೆಂಬರ್ 11ರ ಘಟನೆಯ ರೀತಿಯಲ್ಲಿ ತನಿಖೆಯನ್ನು ಕೈಗೊಳ್ಳಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿದ್ದು, ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ಸಹ ಇದೇ ರೀತಿಯ ತನಿಖೆಗೆ ಬೆಂಬಲ ಸೂಚಿಸಿದ್ದಾರೆ.
ಟ್ರಂಪ್ ಅವರ ಆಪ್ತ ಸೆನೆಟರ್ ಲಿಂಡ್ಸೆ ಗ್ರಹಾಂ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಸೆಪ್ಟೆಂಬರ್ 11ರ ದುರಂತದ ಬಗ್ಗೆ ಕೈಗೊಂಡ ತನಿಖೆಯ ರೀತಿಯಲ್ಲೇ ಈ ಹಿಂಸಾಚಾರದ ತನಿಖೆಯನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಯೋಗವನ್ನು ರಚಿಸಬೇಕು. ಜತೆಗೆ, ಇಂತಹ ಹಿಂಸಾಚಾರ ಭವಿಷ್ಯದಲ್ಲಿ ನಡೆಯದಂತೆಯೂ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.