ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ದಂಪತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಹಂತಕ

Last Updated 11 ಮಾರ್ಚ್ 2023, 9:23 IST
ಅಕ್ಷರ ಗಾತ್ರ

ಸ್ಯಾನ್ ಫ್ರಾನ್ಸಿಸ್ಕೊ: ವಾಷಿಂಗ್ಟನ್‌ನ ರೆಡ್‌ಮಂಡ್‌ನಲ್ಲಿ ವ್ಯಕ್ತಿಯೊಬ್ಬ ದಂಪತಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮೃತ ಆರೋಪಿಯನ್ನು ರಮಿನ್ ಖೋಡಕರಮ್ರೆಜೈ (38) ಎಂದು ಗುರುತಿಸಲಾಗಿದೆ.

ಮನೆಯೊಂದರ ಮೇಲೆ ಗುಂಡಿನ ದಾಳಿ ನಡೆಸಿ ದಂಪತಿಯನ್ನು ಕೊಂದು, ಆರೋಪಿಯು ಸ್ವತಃ ಗುಂಡು ಹೊಡೆದುಕೊಂಡಿದ್ದಾನೆ ಎಂದು ರೆಡ್‌ಮಂಡ್‌ ಪೊಲೀಸ್ ಮುಖ್ಯಸ್ಥ ಡ್ಯಾರೆಲ್ ಲೋವ್ ಅವರು ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಕೊಲೆಯಾದ ಮಹಿಳೆಯ ತಾಯಿ, ಶಂಕಿತನಿಂದ ತಪ್ಪಿಸಿಕೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೊಲೆಯಾದ ಮಹಿಳೆ ಹಾಗೂ ಹಂತಕ ಖೋಡಕರಮ್ರೆಜೈ ಕ್ಲಬ್‌ಹೌಸ್ ಆ್ಯಪ್‌ ಮೂಲಕ ಪರಿಚಯವಾಗಿದ್ದರು. ಈ ಆ್ಯಪ್‌ ಮೂಲಕ ಆಡಿಯೊ ಚಾಟ್‌ ರೂಮ್‌ನಲ್ಲಿ ಮಾತುಕತೆ ನಡೆಸುತ್ತಿದ್ದರು. ಕೆಲದಿನಗಳ ಬಳಿಕ ಮಹಿಳೆ ಮಾತನಾಡುವುದನ್ನು ನಿಲ್ಲಿಸಿದ್ದರಿಂದ ಕೋಪಗೊಂಡ ಆರೋಪಿ, ಆಕೆಗೆ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದಾಗಿ ಮಹಿಳೆಯು ಆತನಿಂದ ರಕ್ಷಣೆ ಕೋರಿ 2022ರ ಡಿಸೆಂಬರ್‌ನಲ್ಲಿ ರೆಡ್‌ಮಂಡ್‌ ಪೊಲೀಸರಿಗೆ ದೂರು ನೀಡಿದ್ದರು. ಜನವರಿಯಲ್ಲಿ ಮತ್ತೊಮ್ಮೆ ಪೊಲೀಸರನ್ನು ಸಂಪರ್ಕಿಸಿದ್ದರು ಎಂದೂ ಲೋವ್‌ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT