ಮಂಗಳವಾರ, ನವೆಂಬರ್ 24, 2020
26 °C

ಮಯನ್ಮಾರ್: ಬಹುಮತದ ವಿಶ್ವಾಸ ವ್ಯಕ್ತಪಡಿಸಿದ ಎನ್‌ಎಲ್‌ಡಿ ವಕ್ತಾರ

ಎಪಿ Updated:

ಅಕ್ಷರ ಗಾತ್ರ : | |

Prajavani

ಯಾಂಗೂನ್‌: ‘ಮಯನ್ಮಾರ್‌ ರಾಷ್ಟ್ರೀಯ ಸಂಸತ್‌ನ ಮೇಲ್ಮನೆ ಮತ್ತು ಕೆಳಮನೆಯ 642 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸಿದ್ದು, ನಾವು ಮತ್ತೊಮ್ಮೆ ಅಧಿಕಾರಕ್ಕೇರಲಿದ್ದೇವೆ’ ಎಂದು ಆಡಳಿತಾರೂಢ ನ್ಯಾಷನಲ್‌ ಲೀಗ್‌ ಫಾರ್‌ ಡೆಮಾಕ್ರಸಿ (ಎನ್‌ಎಲ್‌ಡಿ) ಪಕ್ಷದ ವಕ್ತಾರ ಮೊನಿವಾ ಆಂಗ್‌ ಶಿನ್‌ ಸೋಮವಾರ ತಿಳಿಸಿದ್ದಾರೆ.

ಆದರೆ ಚುನಾವಣಾ ಆಯೋಗ ಇನ್ನೂ ಅಂತಿಮ ಫಲಿತಾಂಶ ಪ್ರಕಟಿಸಿಲ್ಲ. 

‘ನಾವು 377 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದೆವು. ಈಗಿನ ಫಲಿತಾಂಶವನ್ನು ನೋಡಿದರೆ ನಮಗೆ ಇದಕ್ಕಿಂತಲೂ ಹೆಚ್ಚಿನ ಸ್ಥಾನಗಳು ಲಭಿಸುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ. 

ಆಂಗ್‌ ಸಾನ್‌ ಸೂಕಿ ನೇತೃತ್ವದ ಎನ್‌ಎಲ್‌ಡಿ ಪರ ಹೆಚ್ಚು ಒಲವು ಇದ್ದು ಈ ಪಕ್ಷವೇ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ರಾಜಕೀಯ ವಿಶ್ಲೇಷಕರು ಈಗಾಗಲೇ ತಿಳಿಸಿದ್ದಾರೆ.   

ಚುನಾವಣೆಯಲ್ಲಿ 90ಕ್ಕೂ ಅಧಿಕ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಹಿಂದಿನ ಚುನಾವಣೆಯಲ್ಲಿ ಸೂಕಿ ನೇತೃತ್ವದ ಎನ್‌ಎಲ್‌ಡಿ, ಭಾರಿ ಬಹುಮತದಿಂದ ಜಯಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು