ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Taiwan Earthquake: ಅಲುಗಾಡಿದ ರೈಲು, ಮೂರು ಅಂತಸ್ತಿನ ಕಟ್ಟಡ ಕುಸಿತ

Last Updated 18 ಸೆಪ್ಟೆಂಬರ್ 2022, 13:30 IST
ಅಕ್ಷರ ಗಾತ್ರ

ತೈಪೆ: ತೈವಾನ್‌ನಲ್ಲಿ ಭಾನುವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ದಾಖಲಾಗಿದೆ.

ತೈವಾನ್‌ನ ಆಗ್ನೇಯ ಕರಾವಳಿಯಲ್ಲಿ ಸಂಭವಿಸಿದ ಭೂಕಂಪದ ತೀವ್ರತೆಗೆ ನಿಲ್ಲಿಸಿದ್ದ ರೈಲು ಅಲುಗಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹರಿದಾಡುತ್ತಿದೆ.

ಯುಲಿ ಪಣ್ಣಟದ ಸಮೀಪದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ.

ಪರ್ವತ ಪ್ರದೇಶದಲ್ಲಿ ಗುಡ್ಡ ಕುಸಿತದಿಂದಾಗಿ 400 ಪ್ರವಾಸಿಗರು ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಸುಮಾರು 7,000 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆಯಲ್ಲಿ ವಾಹನಗಳು ಚಲಿಸುತ್ತಿರುವ ವೇಳೆ ಮಣ್ಣು, ಬಂಡೆಕಲ್ಲು ಕುಸಿಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ.

ಹಲವು ಕಡೆ ರಸ್ತೆ, ಸೇತುವೆ ಬಿರುಕು ಬಿಟ್ಟಿದ್ದು, ರೈಲುಗಳು ಹಳಿ ತಪ್ಪಿವೆ.

ತೈವಾನ್‌ನಲ್ಲಿ ಪ್ರಬಲ ಭೂಕಂಪದ ಬೆನ್ನಲ್ಲೇ ಜಪಾನ್ ಹವಾಮಾನ ಇಲಾಖೆಯು ಸುನಾಮಿ ಎಚ್ಚರಿಕೆಯನ್ನು ನೀಡಿತ್ತು. ಬಳಿಕ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT