ಶನಿವಾರ, ಸೆಪ್ಟೆಂಬರ್ 25, 2021
29 °C

ಮಹಿಳೆಯರೂ ಸರ್ಕಾರದಲ್ಲಿ ಭಾಗಿಯಾಗಬೇಕು: ತಾಲಿಬಾನ್‌

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದ ಎಲ್ಲರಿಗೂ ತಾಲಿಬಾನ್‌ ಕ್ಷಮಾದಾನ ಘೋಷಿಸಿದ್ದು, ಮಹಿಳೆಯರೂ ತನ್ನ ಸರ್ಕಾರದಲ್ಲಿ ಭಾಗಿಯಾಗಬೇಕು ಎಂದು ತಾಲಿಬಾನ್‌ ಅಧಿಕಾರಿಯೊಬ್ಬರು ಒತ್ತಾಯಿಸಿದ್ದಾರೆ.

ಅಫ್ಗಾನಿಸ್ತಾನದ ಸರ್ಕಾರಿ ಸ್ವಾಮ್ಯದ ದೂರದರ್ಶನ ವಾಹಿನಿಯಲ್ಲಿ ಇಸ್ಲಾಮಿಕ್ ಎಮಿರೇಟ್‌ನ ಸಾಂಸ್ಕೃತಿಕ ಆಯೋಗದ ಸದಸ್ಯ ಎನಾಮುಲ್ಲಾ ಸಮಂಗಾನಿ ಈ ಹೇಳಿಕೆ ನೀಡಿದ್ದಾರೆ. ದೂರದರ್ಶನ ವಾಹಿನಿಯು ಉಗ್ರರ ಹಿಡಿತದಲ್ಲಿದೆ.

ಈ ಬೆಳವಣಿಗೆಯಿಂದ ಮಹಿಳೆಯರು ತೊಂದರೆಗೆ ಒಳಗಾಗುವುದನ್ನು ಇಸ್ಲಾಮಿಕ್ ಎಮಿರೇಟ್ಸ್‌ ಬಯಸುವುದಿಲ್ಲ ಎಂದು ಅವರು ತಿಳಿಸಿದರು.

‘ಸರ್ಕಾರ ಯಾವ ರೀತಿ ಇರಲಿದೆ. ಅದರ ರಚನೆ ಹೇಗಿರುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲ. ಆದರೆ ಅನುಭವದ ಆಧಾರದ ಮೇಲೆ, ಸಂಪೂರ್ಣ ಇಸ್ಲಾಮಿಕ್ ನಾಯಕತ್ವ ಇರಬೇಕು ಮತ್ತು ಈ ಸರ್ಕಾರದಲ್ಲಿ ಎಲ್ಲ ವರ್ಗಗಳೂ ಭಾಗಿಯಾಗಬೇಕು’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು