ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ತಾಲಿಬಾನ್ ಆತ್ಮಾಹುತಿ ಬಾಂಬರ್ ಹತ್ಯೆ

Last Updated 17 ಫೆಬ್ರುವರಿ 2023, 13:28 IST
ಅಕ್ಷರ ಗಾತ್ರ

ಪೆಶಾವರ: ಅಫ್ಗಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ತಾಲಿಬಾನ್‌ನ ಆತ್ಮಾಹುತಿ ಬಾಂಬರ್‌ನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಾಹುತಿ ಬಾಂಬರ್ ಇರುವುದನ್ನು ಗುಪ್ತಚರ ಅಧಿಕಾರಿಗಳು ಖಚಿತಪಡಿಸಿದ ನಂತರ ಖೈಬರ್-ಪಖ್ತುಂಖ್ವಾ ಪ್ರಾಂತ್ಯದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯ ಸ್ಪಿಂಕೈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ದಾಳಿ ವೇಳೆ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ ನಡೆಸಿದ ವೇಳೆ, ತನ್ನ ದೇಹಕ್ಕೆ ಸುತ್ತಿಕೊಂಡಿದ್ದ ಸ್ಫೋಟಕಗಳು ಸ್ಫೋಟಗೊಂಡವು. ಬಾಂಬರ್‌ನನ್ನು ಅಫ್ಘಾನಿಸ್ತಾನದ ಲೋಗರ್ ಪ್ರಾಂತ್ಯದವನೆಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT