ಬುಧವಾರ, ಸೆಪ್ಟೆಂಬರ್ 22, 2021
21 °C

ಅಫ್ಗಾನಿಸ್ತಾನದ ದಕ್ಷಿಣ ಭಾಗವನ್ನು ದಾಟಿ ಮೂರು ನಗರಗಳನ್ನು ವಶಪಡಿಸಿಕೊಂಡ ತಾಲಿಬಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನದ ದಕ್ಷಿಣ ಭಾಗವನ್ನು ದಾಟಿ ಮೂರು ಪ್ರಮುಖ ನಗರಗಳನ್ನು ತಾಲಿಬಾನ್‌ ಶುಕ್ರವಾರ ವಶಪಡಿಸಿಕೊಂಡಿದೆ. ಆ ಮೂಲಕ ಅಫ್ಗಾನಿಸ್ತಾನದ ಶೇ 75 ಭಾಗದ ಮೇಲೆ ತಾಲಿಬಾನ್‌ ಹಿಡಿತ ಸಾಧಿಸಿದಂತಾಗಿದೆ.

ಹೆಲ್ಮಂಡ್‌ ಪ್ರಾಂತ್ಯದ ಪ್ರಮುಖ ನಗರ ಲಷ್ಕರ್ ಗಾಹ್, ಝಬುಲ್ ಪ್ರಾಂತ್ಯದ ಸ್ಥಳೀಯ ರಾಜಧಾನಿ ಖಲತ್ ಮತ್ತು ಉರುಜ್ಗಾನ್‌ ಪ್ರಾಂತ್ಯದ ತಿರಿನ್ ಕೋಟ್ ಅನ್ನು ತಾಲಿಬಾನ್‌ ವಶಪಡಿಸಿಕೊಂಡಿರುವುದಾಗಿ ಅಫ್ಗಾನಿಸ್ತಾನದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಓದಿ: 

ತಾಲಿಬಾನ್ ಉಗ್ರರು ಕಂದಹಾರ್‌ ವಶಪಡಿಸಿಕೊಂಡಿರುವ ಬಗ್ಗೆ ಇಂದು (ಶುಕ್ರವಾರ) ಮುಂಜಾನೆ ವರದಿಯಾಗಿತ್ತು.

ತಾಲಿಬಾನ್‌ ಇತ್ತೀಚಿನ ದಿನಗಳಲ್ಲಿ ತನ್ನ ಪ್ರಾಬಲ್ಯವನ್ನು ತೀವ್ರ ಗತಿಯಲ್ಲಿ ಸಾಧಿಸುತ್ತಿರುವುದು ಅಫ್ಗಾನಿಸ್ತಾನದ ಸರ್ಕಾರವನ್ನು ಚಿಂತೆಗೀಡು ಮಾಡಿದೆ.

ಓದಿ: 

ಹಲವೆಡೆ ಯುದ್ಧದ ಸ್ಥಳಗಳಿಂದ ವಿಶೇಷ ಕಾರ್ಯಾಚರಣೆ ಪಡೆಗಳೇ ಪಲಾಯನಗೈದಿವೆ. ಅಪಾರ ವೆಚ್ಚ ಮಾಡಿ ತರಬೇತಿ ಪಡೆದಿದ್ದರೂ ಸೇನಾ ಪಡೆಗಳು ಯುದ್ಧ ಭೂಮಿಯಿಂದ ಓಡಿ ಹೋಗುತ್ತಿರುವುದು ಏಕೆ ಎನ್ನುವ ಪ್ರಶ್ನೆ ಸರ್ಕಾರವನ್ನು ಕಾಡುತ್ತಿದೆ.

ಹಲವೆಡೆ ಸಂಭವಿಸಿರುವ ಹಿಂಸಾಚಾರದಿಂದಾಗಿ ಸಾವಿರಾರು ಮಂದಿ ಕಾಬೂಲ್‌ನಲ್ಲಿ ಆಶ್ರಯ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು