ಬುಧವಾರ, ಮೇ 25, 2022
29 °C

ವೈರಲ್: ಸಂಗೀತಗಾರನ ಎದುರೇ ಸಂಗಿತದ ಉಪಕರಣ ಸುಟ್ಟ ತಾಲಿಬಾನಿಗಳು

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕಾಬೂಲ್: ಅಫ್ಗಾನಿಸ್ತಾನದ ಸಂಗೀತಗಾರರೊಬ್ಬರ ಸಂಗೀತದ ಉಪಕರಣಗಳನ್ನು ತಾಲಿಬಾನಿಗಳು ಸಾರ್ವಜನಿಕವಾಗಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಅಫ್ಗಾನಿಸ್ತಾನದ ಪಕ್ತಿಯಾ ಪ್ರಾಂತ್ಯದ ಜಾಜೈ ಅರಬ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಅಲ್ಲಿನ ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಸಂಗೀತಕ್ಕೆ ಅವಕಾಶ ಇಲ್ಲ ಎಂದು ಸಂಗೀತಗಾರನ ಎದುರೇ ಅವರ ಉಪಕರಣವನ್ನು ತಾಲಿಬಾನಿಗಳು ಸುಟ್ಟು ಹಾಕಿದ್ದಾರೆ. ಈ ವೇಳೆ ಅವರು ಮದುವೆ ಕಾರ್ಯಕ್ರಮವೊಂದರಲ್ಲಿ ಸಂಗೀತ ನುಡಿಸುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಸಂಗೀತಗಾರ ಅಳುತ್ತಿರುವುದು ವಿಡಿಯೊದಲ್ಲಿ ಕಂಡು ಬಂದರೆ, ಸ್ಥಳದಲ್ಲಿದ್ದ  ತಾಲಿಬಾನಿಗಳು ಗಹಗಹಿಸಿ ನಗುತ್ತಿರುವುದು ಕಂಡು ಬಂದಿದೆ.

ಇತ್ತೀಚೆಗಷ್ಟೆ ಬಟ್ಟೆ ಅಂಗಡಿಗಳಲ್ಲಿ ಗೊಂಬೆಗಳನ್ನು ಶಿರಚ್ಚೇಧನ ಮಾಡಿ ತಾಲಿಬಾನಿಗಳು ಅಟ್ಟಹಾಸ ಮೆರೆದಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು