ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 10 ಲಕ್ಷ ಪ್ರಕರಣ ದಾಟಿದ ಅಮೆರಿಕದ ಮೊದಲ ರಾಜ್ಯ ಟೆಕ್ಸಾಸ್‌

Last Updated 9 ನವೆಂಬರ್ 2020, 9:20 IST
ಅಕ್ಷರ ಗಾತ್ರ

ಹ್ಯೂಸ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್‌ ಅವರು ಕೊರೊನಾ ವೈರಸ್‌ ನಿಯಂತ್ರಿಸಲು ಸಜ್ಜಾಗುತ್ತಿರುವ ನಡುವೆಯೇ ಟೆಕ್ಸಾಸ್‌, 10 ಲಕ್ಷ ಕೋವಿಡ್‌ ಪ್ರಕರಣ ದಾಟಿದ ಅಮೆರಿಕದ ಮೊದಲ ರಾಜ್ಯ ಎನಿಸಿಕೊಂಡಿದೆ.

ಈ ವಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾದ 31 ರಾಜ್ಯಗಳಲ್ಲಿ ಟೆಕ್ಸಾಸ್‌ ಕೂಡ ಒಂದಾಗಿದೆ. ಹ್ಯಾರಿಸ್‌ ಕೌಂಟಿಯಲ್ಲಿ ಈವರೆಗೆ 1.67 ಲಕ್ಷ ಪ್ರಕರಣಗಳು ಮತ್ತು 2,300 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯ ತಿಳಿಸಿದೆ.

‘ನಾವು ಈಗಲೂ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ನಡುವೆ ಸಿಲುಕಿದ್ದೇವೆ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು’ ಎಂದು ಹ್ಯಾರಿಸ್‌ ಕೌಂಟಿಯ ಸಾರ್ವಜನಿಕ ಆರೋಗ್ಯ ಇಲಾಖೆಯ ಕಾರ್ಯಕಾರಿ ನಿರ್ದೇಶಕ ಡಾ. ಉಮೈರ್‌ ಷಾ ಅವರು ತಿಳಿಸಿದರು.

ಕೊರೊನಾ ಸೋಂಕಿನಿಂದ ಅತಿ ಹೆಚ್ಚು ಪೀಡಿತಗೊಂಡ ರಾಷ್ಟ್ರಗಳಲ್ಲಿ ಅಮೆರಿಕವು ಪ್ರಥಮ ಸ್ಥಾನದಲ್ಲಿದೆ. ಈವರೆಗೆ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 1 ಕೋಟಿಗೆ ತಲುಪಿದೆ. 2.37 ಲಕ್ಷ ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT