ಮಂಗಳವಾರ, ನವೆಂಬರ್ 24, 2020
21 °C

ಕೋವಿಡ್‌ ಲಸಿಕೆ: ಮೋದಿ ಬದ್ಧತೆಗೆ ಡಬ್ಲ್ಯೂಎಚ್‌ಒ ಮೆಚ್ಚುಗೆ

ಏಜೆನ್ಶೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್: ಕೋವಿಡ್‌–19 ಪಿಡುಗಿನ ವಿರುದ್ಧದ ಹೋರಾಟ ಹಾಗೂ ಲಸಿಕೆ ತಯಾರಿಕೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬದ್ಧತೆಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್‌ ಅಧನಾಮ್‌ ಗೆಬ್ರೆಯೆಸಸ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಕುರಿತಂತೆ ಪ್ರಧಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಬಳಿಕ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌ ಸೋಂಕು ಜಗತ್ತಿಗೆ ಸವಾಲಾಗಿದೆ. ಪರಸ್ಪರ ಸಹಕಾರದೊಂದಿಗೆ ಮಾತ್ರ ಇದನ್ನು ಕೊನೆಗಾಣಿಸಲು ಸಾಧ್ಯ. ಕೋವಿಡ್‌ ವಿರುದ್ಧದ ಹೋರಾಟ, ಲಸಿಕೆ ತಯಾರಿಕೆ ಹಾಗೂ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ ಸಾಮರ್ಥ್ಯ ಬಳಕೆಯ ಬಗ್ಗೆ ತೋರುತ್ತಿರುವ ಬದ್ಧತೆಗೆ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

ವೈದ್ಯ ವಿಜ್ಞಾನ ಹಾಗೂ ಔಷಧಿ ಕ್ಷೇತ್ರದಲ್ಲಿ ಪರಸ್ಪರ ಸಹಭಾಗಿತ್ವದ ಮೂಲಕ ಜ್ಞಾನ, ಸಂಶೋಧನೆಯ ವಿನಿಮಯ ಮತ್ತು ಪರಿಣಾಮಕಾರಿ ತರಬೇತಿಯೊಂದಿಗೆ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡಬೇಕಿದೆ. ಈ ಬಗ್ಗೆ ಭಾರತ ಜಾಗತಿಕಮಟ್ಟದಲ್ಲಿ ನೆರವು ನೀಡಲಿದೆ ಎಂದು ಇಬ್ಬರು ದೂರವಾಣಿ ಮೂಲಕ ಚರ್ಚೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು