ಸೋಮವಾರ, ಡಿಸೆಂಬರ್ 6, 2021
23 °C

ಆಸ್ಟ್ರೇಲಿಯಾ: ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಬೇಸ್‌, ಹಿಜ್‌ಬುಲ್‌

ಎಪಿ Updated:

ಅಕ್ಷರ ಗಾತ್ರ : | |

Prajavani

ಕೆನ್‌ಬೆರಾ: ಬಲಪಂಥೀಯ ಉಗ್ರಗಾಮಿಗಳ ಗುಂಪು 'ದಿ ಬೇಸ್‌' ಹಾಗೂ ಲೆಬನಾನ್‌ ಮೂಲದ 'ಹಿಜ್‌ಬುಲ್' ಅನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರ್ಪಡೆ ಮಾಡಲು ಆಸ್ಟ್ರೇಲಿಯಾ ಸರ್ಕಾರ ಮುಂದಾಗಿದೆ.

‘ದೇಶದಲ್ಲಿ ಉಗ್ರಗಾಮಿ ಸಂಘಟನೆಗಳ ಉಪಟಳ ಹೆಚ್ಚಾಗುತ್ತಿರುವುದು ರಾಷ್ಟ್ರೀಯ ಭದ್ರತೆಗೆ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ, ಈ ಉಗ್ರಗಾಮಿ ಗುಂಪುಗಳನ್ನು ಭಯೋತ್ಪಾದಕ ಸಂಘಟನೆಗಳು ಎಂಬುದಾಗಿ ಘೋಷಿಸಲು ಉದ್ದೇಶಿಸಲಾಗಿದೆ’ ಎಂದು ಗೃಹ ಸಚಿವೆ ಕರೆನ್ ಆಂಡ್ರ್ಯೂಸ್‌ ಬುಧವಾರ ಹೇಳಿದ್ದಾರೆ.

‘ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳು ಭಯೋತ್ಪಾದನೆಯ ಅಪಾಯವನ್ನು ಎದುರಿಸುತ್ತಿವೆ. ದೇಶದಲ್ಲಿ ಕೋವಿಡ್‌ ಪಿಡುಗಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಸಡಿಲಿಸಿದ ನಂತರ ಈ ಉಗ್ರ ಸಂಘಟನೆಗಳು ಮತ್ತಷ್ಟೂ ಅಪಾಯಕಾರಿ ಎನಿಸಿವೆ’ ಎಂದು ಅವರು ಹೇಳಿದ್ದಾರೆ.

ದಿ ಬೇಸ್ ಸಂಘಟನೆ ಅಮೆರಿಕದಲ್ಲಿ 2018ರಲ್ಲಿ ಅಸ್ತಿತ್ವಕ್ಕೆ ಬಂದಿದೆ. ನಾಜಿವಾದದಿಂದ ಪ್ರೇರೇಪಿತ ಈ ಸಂಘಟನೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಹಾಗೂ ಯುರೋಪ್‌ನಲ್ಲಿ ಸಕ್ರಿಯವಾಗಿದೆ.

‘ಎಕ್ಸಟರ್ನಲ್ ಸೆಕ್ಯುರಿಟಿ ಆರ್ಗನೈಜೇಷನ್‌’ ಸೇರಿದಂತೆ 25 ಇಸ್ಲಾಮಿಕ್ ಉಗ್ರಗಾಮಿ ಗುಂಪುಗಳನ್ನು ಆಸ್ಟ್ರೇಲಿಯಾ ಈಗಾಗಲೇ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು