ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ –ಉಕ್ರೇನ್‌ ಬಿಕ್ಕಟ್ಟು: ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತು ಸಭೆ 

Last Updated 22 ಫೆಬ್ರವರಿ 2022, 2:16 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ಭೀತಿ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು (ಮಂಗಳವಾರ) ತುರ್ತು ಸಭೆ ನಡೆಸಲಿದೆ ಎಂದು ವರದಿಯಾಗಿದೆ.

‘ಉಕ್ರೇನ್ ಮೇಲೆ ರಷ್ಯಾ ನಡೆಸಬಹುದಾದ ದಾಳಿ ಕುರಿತಂತೆ ತುರ್ತಾಗಿ ಚರ್ಚೆ ನಡೆಸಲು ಅಮೆರಿಕ ಮತ್ತು ಮಿತ್ರರಾಷ್ಟ್ರಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ನಡೆಸುವಂತೆ ಮನವಿ ಮಾಡಿವೆ ಎಂದುವಿಶ್ವಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ’ ಎಂದು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ತಡೆಯಲು ರಾಜತಾಂತ್ರಿಕ ಪ್ರಯತ್ನಗಳು ನಡೆಯುತ್ತಿರುವಾಗಲೇ, ಅಮೆರಿಕ ನಾಯಕರ ಜೊತೆಗಿನ ಶೃಂಗಸಭೆಗೆ ಯಾವುದೇ ಮಹತ್ವ ಇಲ್ಲ ಎಂದು ರಷ್ಯಾ ಪ್ರಕಟಿಸಿದೆ. ಇದರಿಂದಾಗಿ ಉಕ್ರೇನ್‌ ಬಿಕ್ಕಟ್ಟು ಶಮನಗೊಳಿಸುವ ಉದ್ದೇಶಕ್ಕೆ ತಣ್ಣೀರು ಎರಚಿದಂತಾಗಿದೆ.

ಉಕ್ರೇನ್‌ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ರಷ್ಯಾ ಮತ್ತು ಅಮೆರಿಕದ ಅಧ್ಯಕ್ಷರ ನಡುವೆ ಶೃಂಗಸಭೆ ನಡೆಯುವ ಸಾಧ್ಯತೆಯನ್ನು ಫ್ರಾನ್ಸ್‌ ಘೋಷಿಸಿದ ನಂತರ, ಇದು ‘ತುಂಬಾ ಮುಂಚಿತ’ವಾಯಿತು ಎಂದು ರಷ್ಯಾ ಪ್ರತಿಕ್ರಿಯಿಸಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದರು. ಈ ವೇಳೆ ಅವರು ಪಾಶ್ಚಾತ್ಯ ಶಕ್ತಿಗಳು ರಷ್ಯಾದ ಭದ್ರತೆಗೆ ಬೆದರಿಕೆಯೊಡ್ಡಲು ಉಕ್ರೇನ್‌ ಅನ್ನು ಸಾಧನವಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದರು.

ಉಕ್ರೇನ್‌ನ ಬಂಡುಕೋರರ ಹಿಡಿತದಲ್ಲಿರುವ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಪರಿಗಣಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದಾಗಿಯೂ ಪುಟಿನ್‌ ಇದೇ ವೇಳೆ ಪ್ರಕಟಿಸಿದ್ದರು.

ಪೂರ್ವ ಉಕ್ರೇನ್‌ನ ಡೊನೆಟ್‌ಸ್ಕ್‌ ಮತ್ತು ಲುಗಾನ್‌ಸ್ಕ್‌ನ ಪ್ರತ್ಯೇಕತಾವಾದಿ ಪ್ರದೇಶಗಳನ್ನು ಬಹಿರಂಗವಾಗಿ ಬೆಂಬಲಿಸುವ ರಷ್ಯಾ ನಿರ್ಧಾರವು ಪರಿಸ್ಥಿತಿಯನ್ನು ಮತ್ತಷ್ಟು ಕಗ್ಗಂಟಾಗಿಸುವ ಸಾಧ್ಯತೆಗಳಿವೆ.

‘ರಷ್ಯಾಕ್ಕೆ ಮುಖಾಮುಖಿಯಾಗಲು ಉಕ್ರೇನ್ ಅನ್ನು ಸಾಧನ್ನವನ್ನಾಗಿ ಬಳಸುವುದು ನಮಗೆ ಗಂಭೀರವಾದ, ದೊಡ್ಡ ಬೆದರಿಕೆಯನ್ನು ಒಡ್ಡುತ್ತದೆ. ರಷ್ಯಾದ ಮೊದಲ ಆದ್ಯತೆ ಘರ್ಷಣೆಯಲ್ಲ, ಭದ್ರತೆ’ ಎಂದು ಪುಟಿನ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT