ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮಿಕ್ರಾನ್‌: ಬ್ರಿಟನ್‌ನಲ್ಲಿ ಮೂರನೇ ಪ್ರಕರಣ ಪತ್ತೆ

Last Updated 28 ನವೆಂಬರ್ 2021, 19:07 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್‌ನಲ್ಲಿ ರೂಪಾಂತರಿ ಓಮಿಕ್ರಾನ್‌ ತಳಿ ಸೋಂಕಿನ ಮೂರನೇ ಪ್ರಕರಣ ಪತ್ತೆಯಾಗಿದೆ ಎಂದು ಹೆಲ್ತ್‌ ಸೆಕ್ಯುರಿಟಿ ಏಜೆನ್ಸಿ ಭಾನುವಾರ ಹೇಳಿದೆ.

ಸೋಂಕು ಪ್ರಸರಣ ತಡೆಯಲು, ವಾಣಿಜ್ಯ ಪ್ರದೇಶ ಹಾಗೂ ಸಾರ್ವಜನಿಕ ಸಾರಿಗೆಗಳಲ್ಲಿ ಮಾಸ್ಕ್‌ ಧರಿಸುವುದನ್ನು ಮಂಗಳವಾರದಿಂದ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ವ್ಯಕ್ತಿಯಲ್ಲಿ ಈ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ನಗರದ ವೆಸ್ಟ್‌ಮಿನ್‌ಸ್ಟರ್ ಪ್ರದೇಶದಲ್ಲಿ ಕೆಲ ಕಾಲ ತಂಗಿ, ದೇಶ ತೊರೆದಿದ್ದಾರೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದಾದ ವ್ಯಕ್ತಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆಗಳು ಹೆಚ್ಚಿವೆ ಎಂದು ಏಜೆನ್ಸಿ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT