ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಸಾವಿರಾರು ಜನರಿಂದ ಪ್ರತಿಭಟನೆ

Last Updated 17 ನವೆಂಬರ್ 2021, 8:11 IST
ಅಕ್ಷರ ಗಾತ್ರ

ಕೊಲಂಬೊ: ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಕೊರತೆಯಿಂದಾಗಿ ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇದನ್ನು ವಿರೋಧಿಸಿ ಶ್ರೀಲಂಕಾದ ರಾಜಧಾನಿಯಲ್ಲಿ ಮಂಗಳವಾರ ಸಾವಿರಾರು ಜನರು ಪ್ರತಿಭಟನೆ ನಡೆಸಿದರು.

ದೇಶದ ಪ್ರಮುಖ ರಾಜಕೀಯ ವಿರೋಧ ಪಕ್ಷವಾದ ಯುನೈಟೆಡ್ ಪೀಪಲ್ಸ್ ಫೋರ್ಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ದೇಶದ ಆರ್ಥಿಕ ಬಿಕ್ಕಟ್ಟಿಗೆ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಸರ್ಕಾರದ ನೀತಿಗಳೇ ಕಾರಣ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಶ್ರೀಲಂಕಾ ಸಂಸತ್ತಿನಲ್ಲಿ 2022ರ ಬಜೆಟ್‌ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ವಿರೋಧ ಪಕ್ಷಗಳ ನೇತೃತ್ವದಲ್ಲಿ ರಾಜಧಾನಿಯಲ್ಲಿ ಪ್ರತಿಭಟನೆ ನಡೆದಿದೆ.

ವಿದೇಶಿ ಮೀಸಲು ಕಡಿಮೆಯಾಗಲು, ಆಹಾರ ಪದಾರ್ಥಗಳ ಬೆಲೆ ಹೆಚ್ಚಳ, ಹಾಲಿನ ಪುಡಿ, ಅಡುಗೆ ಅನಿಲ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ನೀತಿಗಳೇ ಕಾರಣ ಎಂದು ಪ್ರತಿಭಟನಾಕಾರರು ದೂರಿದರು.

ದೇಶವನ್ನು ಸಾವಯವ ಕೃಷಿಯತ್ತ ಮುಖ ಮಾಡಿಸುವ ಉದ್ದೇಶದಿಂದ ರಾಸಾಯನಿಕ ಗೊಬ್ಬರದ ಆಮದನ್ನು ನಿಷೇಧಿಸಿದ ಸರ್ಕಾರದ ನಿರ್ಧಾರದಿಂದ ದೇಶದಾದ್ಯಂತ ಆಹಾರ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದರು.

ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ಶ್ರೀಲಂಕಾದ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್‌ ಎದುರು ಶೇ 7.4ರಷ್ಟು ಕುಸಿದಿದೆ ಎಂದು ವಿಶ್ವಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT