ಕರಾಚಿ (ಪಿಟಿಐ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಮಣ್ಣಿನ ಗೋಡೆ ಕುಸಿದು ಮೂವರು ಮಕ್ಕಳು ಮೃತಪಟ್ಟು, ಐದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ವಾಯುವ್ಯ ಕ್ವೆಟ್ಟಾ ಪ್ರದೇಶದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಕಂಪನದಿಂದ ಎರಡು ಮನೆಗಳ ಮಣ್ಣಿನ ಗೋಡೆ ಕುಸಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.