ಸೋಮವಾರ, ಮೇ 23, 2022
21 °C

ಇಸ್ರೇಲ್‌ನ ಎಲಾಡ್‌ ನಗರದಲ್ಲಿ ಚಾಕು, ಕೊಡಲಿಯಿಂದ ದಾಳಿ: ಮೂವರ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಎಲಾಡ್: ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿದ್ದ ಮಧ್ಯ ಇಸ್ರೇಲ್‌ನ ನಗರ ಎಲಾಡ್‌ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಚಾಕು, ಕೊಡಲಿಗಳನ್ನು ಹೊಂದಿದ್ದ ದುಷ್ಕರ್ಮಿಗಳು ಉದ್ಯಾನದಲ್ಲಿ ವಾಯುವಿಹಾರದಲ್ಲಿ ತೊಡಗಿದ್ದ ಜನರ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.

ರಸ್ತೆಗಳನ್ನು ಬಂದ್ ಮಾಡಿ, ಹೆಲಿಕಾಪ್ಟರ್ ಮೂಲಕ ಭಯೋತ್ಪಾದಕರ ಬೇಟೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು ಮತ್ತು ಸೇನಾ ಘಟಕಗಳು ಭಯೋತ್ಪಾದಕರನ್ನು ಹಿಡಿಯಲು ಕಾರ್ಯಾಚರಣೆಗೆ ಇಳಿದಿದ್ದಾರೆ.

ಮೂವರು ಮೃತಪಟ್ಟಿರುವುದನ್ನು ದೃಢಪಡಿಸಿರುವ ತುರ್ತು ಕಾರ್ಯಾಚರಣೆ ತಂಡದ ಅಧಿಕಾರಿ ಮ್ಯಾಗೆನ್ ಡೇವಿಡ್ ಆಡಮ್, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

‘ಸ್ವಾತಂತ್ರ್ಯ ದಿನದ ಸಂತಸವನ್ನು ಕ್ಷಣಾರ್ಧದಲ್ಲಿ ಕಿತ್ತುಕೊಳ್ಳಲಾಗಿದೆ’ ಎಂದಿರುವ ಇಸ್ರೇಲ್‌ನ ವಿದೇಶಾಂಗ ಸಚಿವ ಯೈರ್ ಲ್ಯಾಪಿಡ್, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

‘ದಾಳಿಕೋರರನ್ನು ಇನ್ನೂ ಬಂಧಿಸಲಾಗಿಲ್ಲ. ದುಷ್ಕರ್ಮಿಗಳು ಹಲವೆಡೆ ದುಷ್ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದೆ’ಎಂದು ಪೊಲೀಸರು ತಿಳಿಸಿದ್ದಾರೆ.

ಎಲಾಡ್‌ನ 50,000 ನಿವಾಸಿಗಳಲ್ಲಿ ಹೆಚ್ಚಿನವರು ಇಸ್ರೇಲ್‌ನ ಸಂಪ್ರದಾಯಬದ್ಧ ಯಹೂದಿ ಸಮುದಾಯದವರಾಗಿದ್ದಾರೆ. ಅವರನ್ನು ಹರೆಡಿಮ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ.. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು