ಮಂಗಳವಾರ, ಏಪ್ರಿಲ್ 13, 2021
23 °C

ಸೊಮಾಲಿಯಾದ ಮೊಗದಿಶುವಿನಲ್ಲಿ ಕಾರ್‌ ಬಾಂಬ್‌ ಸ್ಫೋಟ– ಮೂವರ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮೊಗದಿಶು: ಸೊಮಾಲಿಯಾದ ರಾಜಧಾನಿ ಮೊಗದಿಶುನಲ್ಲಿ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ನಡೆದ ಕಾರ್‌ ಬಾಂಬ್‌ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

‘ಸ್ಫೋಟಗೊಂಡ ಸ್ಥಳದಿಂದ ಕೆಲವು ಕಿಲೋ ಮೀಟರ್‌ ದೂರದಲ್ಲಿಯೇ ಪೊಲೀಸರು ಕಾರ್‌ ಅನ್ನು ಬೆನ್ನಹತ್ತಿದ್ದರು. ಕಾರ್‌ ಮೇಲೆ ಗುಂಡು ಹಾರಿಸಿದ್ದರಿಂದ ಅನೇಕ ಜನರು ಸ್ಥಳದಿಂದ ದೂರ ಓಡಿದ್ದರು. ಹೀಗಾಗಿ ಸಾವು–ನೋವಿನ ಸಂಖ್ಯೆ ಕಡಿಮೆಯಾಗಿದೆ’ ಎಂದು ಅಧಿಕಾರಿ ಅಬ್ದಿರ್‌ರೆಹಮಾನ್‌ ಮೊಹಮ್ಮದ್‌ ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು