ಶನಿವಾರ, ಸೆಪ್ಟೆಂಬರ್ 25, 2021
27 °C

ಪಾಕಿಸ್ತಾನ: ಆತ್ಮಾಹುತಿ ಬಾಂಬ್‌ ದಾಳಿ– ಮೂವರ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕ್ವೆಟ್ಟಾ (ಪಾಕಿಸ್ತಾನ): ‘ನೈರುತ್ಯ ಪಾಕಿಸ್ತಾನದ ಕ್ವೆಟಾದಲ್ಲಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಅರೆಸೇನಾಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಫ್ರಾಂಟಿಯರ್‌ ಕಾನ್‌ಸ್ಟಾಬ್ಯುಲರಿ ಗಾರ್ಡ್ಸ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಅಫ್ಗಾನಿಸ್ತಾನ ಗಡಿಯ ಬಳಿಯಿರುವ ನಗರದ ಮಿಯಾನ್‌ ಗುಂಡಿಯಲ್ಲಿ ಮೋಟರ್‌ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಇದರಲ್ಲಿ ಮೂವರು ಮೃತಪಟ್ಟಿದ್ದು, ನಾಗರಿಕರು ಸೇರಿದಂತೆ 20 ಮಂದಿಗೆ ಗಾಯಗಳಾಗಿವೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಅಜರ್ ಅಕ್ರಮ್ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು