ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆಯಿಂದ ಚೀನಾದ ಆಕ್ರಮಣಕಾರಿ ನಿಲುವು ಬದಲಾಗುವುದಿಲ್ಲ: ಅಮೆರಿಕ

Last Updated 10 ಅಕ್ಟೋಬರ್ 2020, 9:17 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಸೌಹಾರ್ದಯುತ ಮಾತುಕತೆ ಹಾಗೂ ಒಪ್ಪಂದಗಳ ಹೊರತಾಗಿಯೂ ಚೀನಾ ತನ್ನ ಆಕ್ರಮಣಕಾರಿ ನಿಲುವನ್ನು ಬದಲಿಸಿಕೊಳ್ಳುವುದಕ್ಕೆ ಸಿದ್ಧವಿಲ್ಲ. ಈ ವಾಸ್ತವವನ್ನು ಅರ್ಥಮಾಡಿಕೊಳ್ಳಲೇಬೇಕಿದೆ’ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರಿಯನ್‌ ತಿಳಿಸಿದ್ದಾರೆ.

‘ಚೀನಾವು ಗಡಿ ವಿಚಾರದಲ್ಲಿ ಭಾರತದೊಂದಿಗೆ ತಗಾದೆ ತೆಗೆದಿದ್ದು, ಬಲ ಪ್ರಯೋಗದ ಮೂಲಕ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪ್ರಭುತ್ವ ಸಾಧಿಸಲು ಹೊರಟಿದೆ. ಇದು ಆ ರಾಷ್ಟ್ರದ ನಿಲುವನ್ನು ಎತ್ತಿ ತೋರಿಸುತ್ತದೆ’ ಎಂದಿದ್ದಾರೆ.

‘ಅಮೆರಿಕನ್ನರನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿ ಚೀನಾ ವಿರುದ್ಧ ಎದ್ದು ನಿಲ್ಲಬೇಕಿದೆ. ಜಗತ್ತಿನಲ್ಲಿ ನಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳಬೇಕಿದೆ. ಡೊನಾಲ್ಡ್‌ ಟ್ರಂಪ್‌ ಅವರ ಮುಂದಾಳತ್ವದಲ್ಲಿ ನಾವು ಈಗಾಗಲೇ ಈ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

‘ಚೀನಾದ ಹುವೈ ಹಾಗೂ ಜೆಡ್‌ಟಿಇಟೆಲಿಕಾಂ ಕಂಪನಿಗಳು ಅಮೆರಿಕದವರ ಖಾಸಗಿ ಹಾಗೂ ರಹಸ್ಯ ಮಾಹಿತಿಗಳನ್ನು ಕದಿಯದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆಮದು ಹಾಗೂ ರಫ್ತಿನ ಮೇಲೆ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಭದ್ರತಾ ರಹಸ್ಯ ಸೋರಿಕೆಯಾಗದಂತೆಯೂ ಜಾಗ್ರತೆ ವಹಿಸಲಾಗಿದೆ’ ಎಂದು ಅವರು ನುಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT