ವಾಷಿಂಗ್ಟನ್: ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚಿಸಲು ಅಮೆರಿಕ ಸರ್ಕಾರದ ಉಪಕಾರ್ಯದರ್ಶಿ ವೆಂಡಿ ಆರ್.ಶರ್ಮನ್ ಅವರು ಅ. 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಶೃಂಗಸಭೆಯನ್ನು ಯಶಸ್ವಿಯಾಗಿ ಪೂರೈಸಿದ ಕೆಲವೇ ದಿನಗಳ ನಂತರ, ವೆಂಡಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

‘ಅ.6ರಂದು ದೆಹಲಿಗೆ ಭೇಟಿ ನೀಡುವ ಶರ್ಮನ್ ಅವರು, ಅಂದು ಸರಣಿ ದ್ವಿಪಕ್ಷೀಯ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಇಂಡಿಯಾ–ಐಡಿಯಾಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್ 7 ರಂದು ಮುಂಬೈಗೆ ತೆರಳುವ ಅವರು, ವಾಣಿಜ್ಯ –ವ್ಯಾಪಾರ ಕುರಿತು ನಡೆಯುವ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ‘ ಎಂದು ವಿದೇಶಾಂಗ ಇಲಾಖೆಯ ಪ್ರಕಟಣೆ ತಿಳಿಸಿದೆ. ಮುಂಬೈನಿಂದ ಪಾಕಿಸ್ತಾನಕ್ಕೆ ತೆರಳುವ ವೆಂಡಿ, ಇಸ್ಲಾಮಾಬಾದ್ನಲ್ಲಿ ಪಾಕಿಸ್ತಾನದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ದೆಹಲಿಗೆ ತೆರಳಲುವ ಮೊದಲು, ಶೆರ್ಮನ್ ಸೆಪ್ಟೆಂಬರ್ 29ರಿಂದ ಸ್ವಿಟ್ಜರ್ಲ್ಯಾಂಡ್ ಮತ್ತು ಉಜ್ಬೇಕಿಸ್ತಾನ್ಗೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.