ಫ್ರಾನ್ಸ್‌ನಲ್ಲಿ ವಿಮಾನ ಪತನ: ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ಸಾವು

ಲಿಯಾನ್ (ಫ್ರಾನ್ಸ್): ಫ್ರಾನ್ಸ್‌ನ ಆಲ್ಪ್ಸ್ ಪ್ರದೇಶದಲ್ಲಿ ಶನಿವಾರ ಪ್ರವಾಸಿ ವಿಮಾನ ಪತನಗೊಂಡು ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಕ್ಷಣಾ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಆಗ್ನೇಯ ಫ್ರಾನ್ಸ್‌ನ ಗ್ರೆನೋಬಲ್ ಸಮೀಪದ ಏರ್‌ಫಿಲ್ಡ್‌ನಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಪತನಗೊಂಡಿದೆ.
ಪ್ರತ್ಯಕ್ಷದರ್ಶಿಗಳು ತುರ್ತು ಸೇವೆಗಳ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.