ಸೋಮವಾರ, ಮೇ 23, 2022
27 °C

ಪಾಕಿಸ್ತಾನ: ಕಾಲೇಜು ವ್ಯಾನ್‌ಗೆ ರೈಲು ಡಿಕ್ಕಿ, 3 ವಿದ್ಯಾರ್ಥಿಗಳು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ್‌: ಪಂಜಾಬ್‌ ಪ್ರಾಂತ್ಯದಲ್ಲಿ ಕಾವಲುರಹಿತ ರೈಲ್ವೆ ಕ್ರಾಸಿಂಗ್‌ವೊಂದರಲ್ಲಿ ಕಾಲೇಜು ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟು, 9 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರೈಲು ಜರನ್‌ವಾಲಾದಿಂದ ಲಾಹೋರ್‌ಗೆ ಹೊರಟಿತ್ತು. ಶೀಖುಪುರ ಜಿಲ್ಲೆಯ ಬಹ್ರಿಯಾನ್‌ವಾಲಾ ಎಂಬಲ್ಲಿನ  ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲು ಕಾಲೇಜು ವಾಹನಕ್ಕೆ ಡಿಕ್ಕಿ ಹೊಡೆಯಿತು ಎಂದು ಜಿಯೊ ನ್ಯೂಸ್‌ ವರದಿ ಮಾಡಿದೆ.

ಗಾಯಗೊಂಡವರ ಪೈಕಿ ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು