ಶನಿವಾರ, ಅಕ್ಟೋಬರ್ 23, 2021
20 °C

ಜಪಾನ್‌ನಲ್ಲಿ ಲಾಕ್‌ಡೌನ್ ತೆರವು: ರೈಲು ನಿಲ್ದಾಣಗಳಲ್ಲಿ ಜನಜಂಗುಳಿ

ಎಪಿ Updated:

ಅಕ್ಷರ ಗಾತ್ರ : | |

Prajavani

ಟೊಕಿಯೊ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಆರು ತಿಂಗಳಿನಿಂದ ಜಪಾನ್‌ ದೇಶದಾದ್ಯಂತ ವಿಧಿಸಿದ್ದ ತುರ್ತು ಪರಿಸ್ಥಿತಿಯನ್ನು ಅಂತ್ಯಗೊಳಿಸುತ್ತಿದ್ದಂತೆ, ನೂರಾರು ಮಂದಿ ನೌಕರರು ಉದ್ಯೋಗಕ್ಕಾಗಿ ತಮ್ಮ ಕಚೇರಿಗಳತ್ತ ತೆರಳಲು ಇಲ್ಲಿನ ರೈಲು ನಿಲ್ದಾಣಗಳಲ್ಲಿ ಜಮಾಯಿಸಿದ್ದರು.

ಕೊರೊನಾ ಸೋಂಕಿನ ತೀವ್ರತೆ ಕ್ಷೀಣಿಸಿರುವುದರಿಂದ, ದೇಶದ ಆರ್ಥಿಕ ಪುನಶ್ಚೇತನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಹಿನ್ನೆಲೆಯಲ್ಲಿ ಸರ್ಕಾರ ತುರ್ತುಪರಿಸ್ಥಿತಿಯನ್ನು ಗುರುವಾರ ಅಂತ್ಯಗೊಳಿಸಿತು.

ಲಾಕ್‌ಡೌನ್ ಅಂತ್ಯವಾಗುತ್ತಿದ್ದಂತೆ, ಆರು ತಿಂಗಳುಗಳಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದ ಸಾವಿರಾರು ನೌಕರರು ತಮ್ಮ ತಮ್ಮ ಕಚೇರಿಗಳಿಗೆ ತೆರಳಲು ಶಿಗವನಾ ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದರು. ಹೀಗಾಗಿ ನಗರದ ಹಲವು ರೈಲ್ವೆ ನಿಲ್ದಾಣಗಳು ಮತ್ತು ಕಮ್ಯೂಟರ್ ರೈಲುಗಳು ಪ್ರಯಾಣಿಕರಿಂದ ತುಂಬಿಹೋಗಿದ್ದವು.

ಲಾಕ್‌ಡೌನ್ ತೆರವುಗೊಳಿಸಿರುವುದರಿಂದ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ನೆರವಾಗುವ ಜೊತೆಗೆ, ಜಪಾನಿನ ಆರೋಗ್ಯ ರಕ್ಷಣಾ ವ್ಯವಸ್ಥೆಗಳ ಮೇಲಿನ ಒತ್ತಡವೂ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶದಾದ್ಯಂತ ವಿಧಿಸಿದ್ದ ತುರ್ತು ಪರಿಸ್ಥಿತಿ ಹಾಗೂ ನಿರ್ಬಂಧವನ್ನು ತೆರವುಗೊಳಿಸುತ್ತಿರುವುದಾಗಿ ಜಪಾನ್‌ ಪ್ರಧಾನಿ ಯೋಶಿಹಿಡೆ ಸುಗಾ ಮಂಗಳವಾರ ಪ್ರಕಟಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು