ಬುಧವಾರ, ಅಕ್ಟೋಬರ್ 28, 2020
18 °C
ಅಮೆರಿಕ ಅಧ್ಯಕ್ಷೀಯ ಚುನಾವಣೆ; ಅಭ್ಯರ್ಥಿಗಳ ಸಂವಾದ

ಇಂದು ಟ್ರಂಪ್– ಬೈಡನ್ ಮುಖಾಮುಖಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಕಣ ರಂಗೇರುತ್ತಿದ್ದು, ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ (ಸೆ.29) ನಡೆಯಲಿರುವ ಬಹಿರಂಗ ಚರ್ಚೆಯಲ್ಲಿ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಗಳಾದ  ಡೊನಾಲ್ಡ್ ಟ್ರಂಪ್ ಮತ್ತು ಜೋ ಬೈಡನ್‌ ಮುಖಾಮುಖಿಯಾಗುವರು.

ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ. ಬೈಡನ್‌ ಅವರು ಡೆಮಾಕ್ರಟಿಕ್ ಪಕ್ಷದ ಹುರಿಯಾಳು.

ಚುನಾವಣೆಗೂ ಮುನ್ನ ಮೂರು ಬಾರಿ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಗಳು ಮತ್ತು ಸಾರ್ವಜನಿಕರ ನಡುವೆ ಸಂವಾದ ನಡೆಯುವುದು. ಮಂಗಳವಾರ ನಡೆಯುತ್ತಿರುವುದು ಮೊದಲ ಸಭೆ. ಉಳಿದ ಸಭೆಗಳು ಅಕ್ಟೋಬರ್ 15ರಂದು ಫ್ಲಾರಿಡಾದ ಮಿಯಾಮಿಯಲ್ಲಿ ಮತ್ತು ಅಕ್ಟೋಬರ್ 22ರಂದು ನಾಶ್ವಿಲ್ಲೆಯಲ್ಲಿ ನಡೆಯಲಿವೆ.

ಮಂಗಳವಾರ ನಡೆಯುವ ಚರ್ಚೆಯಲ್ಲಿ ಉಭಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ರಾಜಕೀಯ ಪಯಣ, ದೇಶದ ಆರ್ಥಿಕತೆ, ವರ್ಣಭೇದ ನೀತಿ ಮತ್ತು ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸಭಿಕರ ಪ್ರಶ್ನೆಗಳಿಗೂ ಉತ್ತರಿಸಬೇಕಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು