ವಾಷಿಂಗ್ಟನ್: ಅಮೆರಿಕದ ಕಾನೂನು ಉಲ್ಲಂಘಿಸಿದ ನಾಗರಿಕರನ್ನು ವಾಪಸ್ ಕರೆಸಿಕೊಳ್ಳದ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಿರ್ದಿಷ್ಟಾವಧಿಗೆ ವೀಸಾ ನಿರ್ಬಂಧ ವಿಧಿಸಿದ್ದಾರೆ.
ಇಂತಹ ದೇಶಗಳ ಮೇಲೆ ವಿಧಿಸಲಾಗಿದ್ದ ವೀಸಾ ನಿರ್ಬಂಧ ಡಿಸೆಂಬರ್ 31ಕ್ಕೆ ಮುಗಿಯುತ್ತಿರುವುದರಿಂದ ಟ್ರಂಪ್ ಮತ್ತೆ ಅವಧಿಯನ್ನು ವಿಸ್ತರಣೆ ಮಾಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವೀಸಾ ನಿರಾಕರಿಸಿರುವ ಅಧಿಕಾರವನ್ನು ವಿದೇಶಾಂಗ ಕಾರ್ಯದರ್ಶಿ ಮತ್ತು ಹೋಮ್‌ಲ್ಯಾಂಡ್ ಭದ್ರತಾ ಕಾರ್ಯದರ್ಶಿ ಅವರಿಗೆ ನೀಡಿ ಏಪ್ರಿಲ್ 10ರಂದು ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದರು.
‘ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಮತ್ತು ಸಾರ್ವಜನಿಕರ ಆರೋಗ್ಯ ಅಪಾಯಕ್ಕೆ ಸಿಲುಕುವುದನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಟ್ರಂಪ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.