ಶುಕ್ರವಾರ, ಡಿಸೆಂಬರ್ 4, 2020
22 °C

ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ವಜಾಗೊಳಿಸಿದ ಟ್ರಂಪ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ರಕ್ಷಣಾ ಕಾರ್ಯದರ್ಶಿ ಹುದ್ದೆಯಿಂದ ಮಾರ್ಕ್ ಎಸ್ಪರ್ ಅವರನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದಾರೆ.

‘ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಕ್ರಿಸ್ಟೋಫರ್ ಸಿ. ಮಿಲ್ಲರ್ ಅವರು ಈ ಕ್ಷಣದಿಂದಲೇ ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಲು ನನಗೆ ಹರ್ಷವೆನಿಸುತ್ತದೆ’ ಎಂದು ಟ್ರಂಪ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

‘ಮಾರ್ಕ್ ಎಸ್ಪರ್ ಅವರನ್ನು ವಜಾಗೊಳಿಸಲಾಗಿದ್ದು, ಅವರ ಸೇವೆಗಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕ್ರಿಸ್ ದೊಡ್ಡ ಕೆಲಸ ಮಾಡುವ ವಿಶ್ವಾಸವಿದೆ’ ಎಂದೂ ಟ್ರಂಪ್ ತಮ್ಮ ಎರಡನೇ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನವೆಂಬರ್ 3ರಂದು ನಡೆದ ಅಮೆರಿಕದ ಅಧ್ಯಕ್ಷರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ವಿರುದ್ಧ ಟ್ರಂಪ್ ಸೋಲು ಅನುಭವಿಸಿದ್ದಾರೆ. ಚುನಾವಣಾ ಫಲಿತಾಂಶ ಘೋಷಿಸಿದ ಕೆಲವು ದಿನಗಳ ನಂತರ ಟ್ರಂಪ್, ಇದೇ ಮೊದಲ ಬಾರಿಗೆ ತಮ್ಮ ಸಂಪುಟದ ಸಹೋದ್ಯೋಗಿಯೊಬ್ಬರನ್ನು ವಜಾ ಮಾಡಿದ್ದಾರೆ.

ಈ ಹಿಂದೆ ‘ದಿ ಮಿಲಿಟರಿ ಟೈಮ್ಸ್‌’ಗೆ ನೀಡಿದ ಸಂದರ್ಶನದಲ್ಲಿ ಎಸ್ಪರ್, ತಾವು ಟ್ರಂಪ್ ಅವರ ಎಲ್ಲಾ ಮಾತುಗಳಿಗೆ ಮಣೆ ಹಾಕುವುದಿಲ್ಲವೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಎಸ್ಪರ್, ಅಮೆರಿಕದ ರಕ್ಷಣಾ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು