ಭಾನುವಾರ, ಅಕ್ಟೋಬರ್ 25, 2020
28 °C

ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌: ಅಮೆರಿಕ ಅಧ್ಯಕ್ಷ ಟ್ರಂಪ್ ಗುಣಮುಖ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಶ್ವೇತಭವನದ ವೈದ್ಯಾಧಿಕಾರಿ ಸೀಯಾನ್‌ ಕ್ಲಾನಿ ಮಂಗಳವಾರ ತಿಳಿಸಿದ್ದಾರೆ.

ಕಳೆದ 10 ದಿನಗಳ ಹಿಂದೆ ಟ್ರಂಪ್‌ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಅವರು ಇಲ್ಲಿನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಂಕು ತಗುಲಿದ ದಿನದಿಂದಲೂ ಟ್ರಂಪ್‌ ಅವರಿಗೆ ನಿಯಮಿತವಾಗಿ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿತ್ತು.ನಾಲ್ಕೈದು ದಿನಗಳ ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದೆ ಎಂದು ಕ್ಲಾನಿ ಹೇಳಿದ್ದಾರೆ.

ಆ್ಯಂಟಿಜನ್‌ ಪರೀಕ್ಷೆ ಸೇರಿದಂತೆ ಇತರೆ ಸುಧಾರಿತ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿತ್ತು. ಟ್ರಂಪ್‌ ಅವರು ಇದೀಗ ಗುಣಮುಖರಾಗಿದ್ದಾರೆ. ಆದಾಗ್ಯೂ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಟ್ರಂಪ್‌ ಬಿಡುಗಡೆ: ಮಾಸ್ಕ್‌ ತೆಗೆದು ಶ್ವೇತಭವನ ಪ್ರವೇಶ​

ಶ್ವೇತ ಭವನದಲ್ಲಿ ಟ್ರಂಪ್‌ ಸಹಾಯಕ ಹೊರತುಪಡಿಸಿದರೆ ಇತರೆ ಯಾರಿಗೂ ಸೋಂಕು ತಗುಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು