ವಾಷಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಡೊನಾಲ್ಡ್ ಟ್ರಂಪ್ ಆದೇಶ

ವಾಷಿಂಗ್ಟನ್: ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ಜ. 24ರ ವರೆಗೆ ತುರ್ತು ಪರಿಸ್ಥಿತಿ ಹೇರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಜ. 20ರಂದು ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅಧಿಕಾರ ಸ್ವೀಕರಿಸುವರು. ಈ ಸಂದರ್ಭದಲ್ಲಿ ಗಲಭೆ ಸಂಭವಿಸುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ತಿತಿ ಹೇರುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
‘ತುರ್ತು ಪರಿಸ್ಥಿತಿ ವೇಳೆ ಜನರಿಗೆ ತೊಂದರೆಯಾಗದಂತೆ, ಆಸ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಆಂತರಿಕ ಭದ್ರತಾ ವಿಭಾಗ ಹಾಗೂ ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಏಜೆನ್ಸಿಗೆ (ಎಫ್‌ಇಎಂಎ) ಸೂಚನೆ ನೀಡಲಾಗಿದೆ’ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.
ವಾಷಿಂಗ್ಟನ್ ಸೇರಿದಂತೆ ದೇಶದ 50 ರಾಜ್ಯಗಳ ರಾಜಧಾನಿಗಳಲ್ಲಿ ಶಸ್ತ್ರಸಜ್ಜಿತ ಜನರಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ ಎಂದು ಫೆಡರಲ್ ಬ್ಯುರೋ ಆಫ್ ಇನ್‌ವೆಸ್ಟಿಗೇಷನ್ (ಎಫ್‌ಬಿಐ) ಎಚ್ಚರಿಕೆ ನೀಡಿದೆ. ಸಂಭಾವ್ಯ ಗಲಭೆ ಬಗ್ಗೆ ಯುಎಸ್ ನ್ಯಾಷನಲ್ ಗಾರ್ಡ್ ಬ್ಯುರೊ ಸಹ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.