ಮಿಲ್ವೌಕೀ: ‘ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಪ್ರಕಟಿಸದೆ ತಡೆ ಹಿಡಿಯಲಾಗಿದೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ಪ್ರಮುಖ ತಂತ್ರಜ್ಞಾನ ಕಂಪನಿಗಳ ವಿರುದ್ಧ ಹರಿಹಾಯ್ದಿದ್ದಾರೆ.

‘ಇಂತಹ ಪರಿಸ್ಥಿತಿಯನ್ನು ಎಂದಿಗೂ ನೋಡಿಲ್ಲ. ಇದು ಬೇಸರದ ಸಂಗತಿ. ಬೈಡನ್ ನಡೆಸಿದ ಭ್ರಷ್ಟಾಚಾರದ ಪ್ರಕರಣಗಳನ್ನು ಅವರು ಪ್ರಸಾರ ಮಾಡುತ್ತಿಲ್ಲ. ಈ ವಿಷಯ ಎಲ್ಲರಿಗೂ ಗೊತ್ತು. ಬೈಡನ್ ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಏಕೆಂದರೆ, ಅವರನ್ನು ಶ್ರೀಮಂತರನ್ನಾಗಿಸುವ ಕಾರ್ಯವನ್ನು ಬೈಡನ್ ಮಾಡುತ್ತಿದ್ದಾರೆ’ ಎಂದು ಟ್ರಂಪ್ ಶ್ವೇತಭವನದಲ್ಲಿ ತಿಳಿಸಿದ್ದಾರೆ.

ವಿಸ್ಕೊನ್‌ಸಿನ್‌ನಲ್ಲಿ ನಡೆದ ಇನ್ನೊಂದು ಪ್ರತ್ಯೇಕ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಟ್ರಂಪ್ ಅವರ ಹಿರಿಯ ಪುತ್ರ ಜ್ಯೂನಿಯರ್ ಟ್ರಂಪ್, ‘ಮಾಧ್ಯಮಗಳು ಮತ್ತು ಪ್ರಮುಖ ತಂತ್ರಜ್ಞಾನ ಕಂಪನಿಗಳು ಬೈಡನ್ ಮತ್ತು ಡೆಮಾಕ್ರಟಿಕ್ ಪಕ್ಷದ ಪರ ಪ್ರಚಾರ ನಡೆಸುತ್ತಿವೆ’ ಎಂದು ದೂರಿದ್ದಾರೆ.

‘ಬೈಡನ್ ವಿರುದ್ಧದ ಯಾವುದೇ ನಕಾರಾತ್ಮಕ ವರದಿಗಳನ್ನು ಪ್ರಕಟಿಸುತ್ತಿಲ್ಲ. ಸಾಮಾಜಿಕ ಮಾಧ್ಯಮಗಳು ಸಹ ಬೈಡನ್ ಅವರನ್ನು ಬೆಂಬಲಿಸುತ್ತಿವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.