ವಾಷಿಂಗ್ಟನ್: ‘ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೊ ಬೈಡನ್ ಬರೀ ಮಾತುಗಾರ ಅಷ್ಟೆ. ಅವರು ತಮ್ಮ ಮಾತಿನಲ್ಲಿ ಹೇಳಿದ್ದರಲ್ಲಿ ಯಾವುದನ್ನೂ ಕಾರ್ಯರೂಪಕ್ಕೆ ತಂದಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ.

ಆನ್‌ಲೈನ್ ಮೂಲಕ ನಡೆದ ಡೆಮಾಕ್ರಟಿಕ್ ರಾಷ್ಟ್ರೀಯ ಸಮಾವೇಶದಲ್ಲಿ, ಪಕ್ಷವು ತಮ್ಮನ್ನು ಅಧ್ಯಕ್ಷೀಯ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದಕ್ಕೆ ಒಪ್ಪಿಗೆ ಸೂಚಿಸಿದ ನಂತರ ಬೈಡನ್ ಭಾಷಣ ಮಾಡಿದ್ದರು. ಅವರ ಭಾಷಣವನ್ನೇ ಗುರಿಯಾಗಿಸಿಕೊಂಡುಸರಣಿ ಟ್ವೀಟ್‌ಗಳನ್ನು ಮಾಡಿರುವ ಟ್ರಂಪ್, ಬೈಡನ್ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

‘ಬೈಡನ್ ತಮ್ಮ ಭಾಷಣದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ, ಕಳೆದ 47 ವರ್ಷಗಳ ಅವಧಿಯಲ್ಲಿ ತಾವು ಹೇಳಿದ್ದರಲ್ಲಿ ಯಾವುದನ್ನೂ ಅವರು ಮಾಡಿಲ್ಲ. ಅವರು ಬರೀ ಮಾತನಾಡುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಮಾವೇಶದಲ್ಲಿ ಮಾತನಾಡಿದ್ದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ವಿರುದ್ಧವೂ ಟ್ರಂಪ್ ಟೀಕಾಪ್ರಹಾರ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.