ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ತಾಂಬುಲ್‌ ಪಾದಚಾರಿ ಮಾರ್ಗದಲ್ಲಿ ಬಾಂಬ್‌ ಸ್ಫೋಟ: ಶಂಕಿತನ ಬಂಧನ

Last Updated 14 ನವೆಂಬರ್ 2022, 10:32 IST
ಅಕ್ಷರ ಗಾತ್ರ

ಇಸ್ತಾಂಬುಲ್‌: ಇಲ್ಲಿನ ಜನಪ್ರಿಯ ಪಾದಚಾರಿ ಮಾರ್ಗವಾದ ಇಸ್ತಿಕಾಲ್‌ ಅವೆನ್ಯೂದಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಟರ್ಕಿಯೆ ಗೃಹಸಚಿವ ಸುಲೇಮಾನ್ ಸೋಯ್ಲು ಸೋಮವಾರ ತಿಳಿಸಿದ್ದಾರೆ.

ಈ ದಾಳಿಯ ಹಿಂದೆ ಕುರ್ದಿಶ್‌ ಉಗ್ರರ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದೂ ಅವರು ಹೇಳಿದ್ದಾರೆ.

ಭಾನುವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಈ ಸಂಬಂಧ 21 ಮಂದಿಯನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT