ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 5.6 ತೀವ್ರತೆಯ ಭೂಕಂಪ: ಟರ್ಕಿ, ಸಿರಿಯಾದಲ್ಲಿ 4,300ಕ್ಕೂ ಅಧಿಕ ಮಂದಿ ಸಾವು

Last Updated 7 ಫೆಬ್ರುವರಿ 2023, 6:23 IST
ಅಕ್ಷರ ಗಾತ್ರ

ಅಂಕಾರ (ಟರ್ಕಿ): ಸೋಮವಾರ ಸಂಭವಿಸಿದ ಎರಡು ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿಯಲ್ಲಿ ಇಂದು ಮತ್ತೊಮ್ಮೆ 5.6 ತೀವ್ರತೆಯ ಭೂಕಂಪ ವರದಿಯಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನಶಾಸ್ತ್ರ ಕೇಂದ್ರ (ಇಎಂಎಸ್‌ಸಿ) ತಿಳಿಸಿದೆ.

ಭೂಕಂಪದ ಕೇಂದ್ರವು ಭೂಮಿಯ 2 ಕಿಮೀ ಆಳದಲ್ಲಿದೆ ಎಂದು ಇಎಂಎಸ್‌ಸಿ ಹೇಳಿದೆ.

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ ದೂರದಲ್ಲಿ ಹಾಗೂ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕೆಲ ಹೊತ್ತಿನ ಬಳಿಕ 7.5 ತೀವ್ರತೆಯ ಭೂಕಂಪವಾಗಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಟರ್ಕಿಯಲ್ಲಿ ಈವರೆಗೆ 2,921 ಮಂದಿ ಹಾಗೂ ಸಿರಿಯಾದಲ್ಲಿ 1,451 ಜನರು ಮೃತಪಟ್ಟಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಟರ್ಕಿ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಕನಿಷ್ಠ 15,834 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 7,840 ಜನರನ್ನು ರಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT