ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ವಿಷಯ ಪುನಃ ಪ್ರಸ್ತಾಪಿಸಿದ ಟರ್ಕಿ ಅಧ್ಯಕ್ಷ ಎರ್ಡೊಗನ್

ವಿಶ್ವಸಂಸ್ಥೆ ಮಹಾ ಅಧಿವೇಶನ
Last Updated 22 ಸೆಪ್ಟೆಂಬರ್ 2021, 5:40 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಅವರು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಕಾಶ್ಮೀರ ವಿಷಯವನ್ನುಪುನಃ ಪ್ರಸ್ತಾಪಿಸಿದ್ದಾರೆ.

ಮಂಗಳವಾರ ನಡೆದ ಅಧಿವೇಶನದ ಸಾಮಾನ್ಯ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಎರ್ಡೊಗನ್‌, ‘ಸಂಬಂಧಪಟ್ಟ ದೇಶಗಳು ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. 74 ವರ್ಷಗಳಿಂದ ಇರುವ ಈ ಸಮಸ್ಯೆಗೆ ವಿಶ್ವಸಂಸ್ಥೆಯ ನಿರ್ಣಯಗಳ ಚೌಕಟ್ಟಿನೊಳಗೇ ಪರಿಹಾರ ಕಂಡುಕೊಳ್ಳಬೇಕು’ ಎಂದು ಹೇಳಿದರು.

ಕಳೆದ ವರ್ಷದ ವಿಶ್ವಸಂಸ್ಥೆಯ ಮಹಾ ಅಧಿವೇಶನ ಉದ್ಧೇಶಿಸಿ ಎರ್ಡೊಗನ್ ಧ್ವನಿಮುದ್ರಿತ ವಿಡಿಯೊ ಭಾಷಣ ಪ್ರಸಾರ ಮಾಡಲಾಗಿತ್ತು. ಆ ಸಂದರ್ಭದಲ್ಲೂ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದರು. ಟರ್ಕಿಯ ಈ ನಡೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಭಾರತ, ‘ಬೇರೆ ರಾಷ್ಟ್ರಗಳ ಸಾರ್ವಭೌಮತ್ವವನ್ನು ಗೌರವಿಸುವುದನ್ನು ಟರ್ಕಿ ಕಲಿಯಬೇಕು’ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT