ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಫ್ಗಾನಿಸ್ತಾನದಲ್ಲಿ ಬಲಪ್ರಯೋಗದ ಮೂಲಕ ರಚನೆಯಾಗುವ ಸರ್ಕಾರಕ್ಕೆ ಮಾನ್ಯತೆ ಇಲ್ಲ’

ಕತಾರ್‌ನಲ್ಲಿ ನಡೆದ ಸಮಾವೇಶದಲ್ಲಿ ಭಾರತ ಸೇರಿ 12 ರಾಷ್ಟ್ರಗಳ ನಿರ್ಧಾರ
Last Updated 13 ಆಗಸ್ಟ್ 2021, 10:08 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ ಅಟ್ಟಹಾಸ ಹೆಚ್ಚುತ್ತಿರುವ ನಡುವೆಯೇ, ಬಲ ಪ್ರಯೋಗದ ಮೂಲಕ ರಚನೆಯಾಗುವ ಯಾವುದೇ ಸರ್ಕಾರಕ್ಕೆ ಮಾನ್ಯತೆ ನೀಡದಿರಲು ಭಾರತ, ಅಮೆರಿಕ ಹಾಗೂ ಚೀನಾ ಸೇರಿದಂತೆ 12 ರಾಷ್ಟ್ರಗಳು ನಿರ್ಧರಿಸಿವೆ.

ವಿಶ್ವಸಂಸ್ಥೆ ಹಾಗೂ ಐರೋಪ್ಯ ಒಕ್ಕೂಟ ಸಹ ಈ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಅಫ್ಗಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕತಾರ್‌ನದೋಹಾದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಗಳು ಈ ಮಹತ್ವದ ನಿರ್ಧಾರಕ್ಕೆ ಬಂದಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.

ಉಜ್ಬೆಕಿಸ್ತಾನ, ಪಾಕಿಸ್ತಾನ, ಬ್ರಿಟನ್, ಜರ್ಮನಿ, ನಾರ್ವೆ, ತಜಕಿಸ್ತಾನ, ಟರ್ಕಿ ಹಾಗೂ ತುರ್ಕ್‌ಮೆನಿಸ್ತಾನ ರಾಷ್ಟ್ರಗಳ ಪ್ರತಿನಿಧಿಗಳು ಸಹ ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

‘ಯುದ್ಧಪೀಡಿತ ಅಫ್ಗಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಗಳಿಗೆ ವೇಗ ನೀಡಬೇಕು ಎಂಬುದಕ್ಕೆ ಎಲ್ಲ ದೇಶಗಳ ಪ್ರತಿನಿಧಿಗಳು ಸಹಮತ ವ್ಯಕ್ತಪಡಿಸಿದರು’ ಎಂದು ವಿದೇಶಾಂಗ ಇಲಾಖೆ ವಕ್ತಾರ ನೆಡ್‌ ಪ್ರೈಸ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT