ಶನಿವಾರ, ಜನವರಿ 28, 2023
24 °C

ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟ: 19 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಗದಿಶು (ಎಪಿ): ಅಲ್-ಶಬಾಬ್ ಉಗ್ರರ ವಿರುದ್ಧ ದಾಳಿ ನಡೆಸಿದ ಮಿಲಿಟರಿ ಪ್ರದೇಶವನ್ನು ಗುರಿಯಾಗಿಸಿ ಬುಧವಾರ ಮುಂಜಾನೆ ಕಾರಿನಲ್ಲಿ ನಡೆಸಿದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಕನಿಷ್ಠ 19 ಜನ ಸಾವನ್ನಪ್ಪಿದ್ದಾರೆ ಎಂದು ಸೊಮಾಲಿಯಾ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಪ್ರಾರ್ಥನೆಯ ನಂತರ ಮಹಾಸ್‌ನಲ್ಲಿ ದಾಳಿ ನಡೆದಿದ್ದು, ಮೃತರಲ್ಲಿ ಸ್ಥಳಿಯರ ಸಂಖ್ಯೆ ಹೆಚ್ಚಿದೆ. ಸೈನಿಕರು, ಪತ್ರಕರ್ತರು ಹಾಗೂ ಸ್ಥಳೀಯರು ಸೇರಿದಂತೆ 52ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮೊಗದಿಶುಗೆ ಕೊಂಡೊಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಅಲ್-ಶಬಾಬ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಜನಸಂದಣಿ ಇರುವ ಸ್ಥಳದಲ್ಲೇ ವಾಹನಗಳು ಸ್ಫೋಟಗೊಂಡಿದ್ದು, ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು